ಬೈಕ್‌ನಂತೆ 34 Km ಮೈಲೇಜ್.. 4.99 ಲಕ್ಷ ರೂಪಾಯಿ, ಈ ಜನಪ್ರಿಯ ಕಾರು ಖರೀದಿಸಲು ಗ್ರಾಹಕರಿಗೆ ಮನಸಿಲ್ಲ.. ಯಾಕೆ?
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಆದರೂ ಈ 2026ರ ಜನವರಿಯಲ್ಲಿ 'ವ್ಯಾಗನ್ಆರ್' ಮಾರಾಟವು ಇಳಿಮುಖವಾಗಿದೆ. ಒಟ್ಟು 15,118 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 24,078 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯಲ್ಲಿ ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -37% ಕುಸಿತವಾಗಿದೆ.
ಜನವರಿಯಲ್ಲಿ 'ಮಾರುತಿ ವ್ಯಾಗನ್ಆರ್' ಮಾರಾಟವು ಇಳಿಕೆಯಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಇದಕ್ಕಿಂತ ಒಂದೆರಡು ಲಕ್ಷ ಹೆಚ್ಚುವರಿ ಬೆಲೆಗೆ ಸ್ವತಃ ಮಾರುತಿ ಸೇರಿದಂತೆ ಬೇರೆ ಕಂಪನಿಯ ಎಸ್‌ಯುವಿಗಳೇ ಖರೀದಿಗೆ ಲಭ್ಯವಿವೆ. ಖರೀದಿದಾರರು ಅವುಗಳತ್ತ ಮನಸ್ಸು ಮಾಡಿದ್ದಾರೆ. ಜೊತೆಗೆ ಈ ಕಾರಿನಲ್ಲಿರುವ ಕೆಲವು ವೈಶಿಷ್ಟ್ಯಗಳು ಗ್ರಾಹಕರಿಗೆ ರುಚಿಸಿಲ್ಲ. ಹೀಗಾಗಿ ಮಾರಾಟ ಸಂಖ್ಯೆಯು ಕಡಿಮೆಯಾಗಿದೆ ಎಂದು ಹೇಳಲಾಗಿದೆ.

'ಮಾರುತಿ ಸುಜುಕಿ ವ್ಯಾಗನ್ಆರ್' ವಿಶೇಷತೆಗಳೇನು:
ಇದು ಬಜೆಟ್ ಬೆಲೆಯಲ್ಲಿ ಲಭ್ಯವಿದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ಹಾಗೂ ಮೇಲ್ಮಧ್ಯಮ ವರ್ಗದ ಜನರು ಸುಲಭವಾಗಿ ಮನೆಗೆ ತರಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 14-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದ್ದು, 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ವ್ಯಾಗನ್ಆರ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 88.50 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,400 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.0-ಲೀ. ಪೆಟ್ರೋಲ್ ಎಂಜಿನ್ 5,500 ಆರ್‌ಪಿಎಂನಲ್ಲಿ 65.26 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,500 ಆರ್‌ಪಿಎಂನಲ್ಲಿ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇನ್ನೊಂದು 1.0.ಲೀ. ಸಿಎನ್‌ಜಿ ಎಂಜಿನ್, 5,300 ಆರ್‌ಪಿಎಂನಲ್ಲಿ 56.70 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,400 ಆರ್‌ಪಿಎಂನಲ್ಲಿ 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ನೂತನ 'ಮಾರುತಿ ವ್ಯಾಗನ್ಆರ್' ಹ್ಯಾಚ್‌ಬ್ಯಾಕ್ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭಬಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, 4 ಪವರ್ ವಿಂಡೋಗಳು, ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್-ಡಿಸೆಂಟ್ ಕಂಟ್ರೋಲ್, ಸ್ಪೀಡ್ ಅಲರ್ಟ್ ಸಿಸ್ಟಮ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್‌ಬೆಲ್ಟ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.


Click it and Unblock the Notifications








