ಮಾರುತಿಯ ಗತ್ತು ಹೆಚ್ಚಿಸಿದ ಕಾರಿದು.. ಬೈಕ್‌ನಂತೆ 34 Km ಮೈಲೇಜ್, ರೂ.4.99 ಲಕ್ಷ.. ಪ್ರತಿದಿನ 532 ಕಾರುಗಳು ಸೇಲ್ಸ್!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಶಕಗಳಿಂದಲೂ ಫುಲ್ ಡಿಮ್ಯಾಂಡ್ ಇದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ.

2025ರಲ್ಲಿ ಈ 'ಮಾರುತಿ ವ್ಯಾಗನ್ಆರ್' ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಬರೋಬ್ಬರಿ 194,238 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಈ ಅಂಕಿ - ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿದಿನ ಸರಿ ಸುಮಾರು 532 ಕಾರುಗಳನ್ನು ಮಾರಾಟ ಮಾಡಲಾಗಿದೆ.

Maruti Suzuki WagonR CY2025 Sales Every Day 532 Cars Delivery

ಮಾರುತಿ ಸುಜುಕಿ ವ್ಯಾಗನ್ಆರ್ ವಿಶೇಷತೆಗಳೇನು:

ಇದು ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಹಾಗೂ ಝಡ್ಎಕ್ಸ್ಐ ಪ್ಲಸ್ ( ZXi+) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 14-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki WagonR CY2025 Sales Every Day 532 Cars Delivery

ನೂತನ 'ವ್ಯಾಗನ್ಆರ್' ಹ್ಯಾಚ್‌ಬ್ಯಾಕ್ ಆಗಿದೆ. ಆದರೂ ಎಸ್‌ಯುವಿಯಂತೆ ಭಾಸವಾಗುತ್ತದೆ. 3,655 ಎಂಎಂ ಉದ್ದ, 1,620 ಎಂಎಂ ಅಗಲ ಮತ್ತು 1,675 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 850 ಕೆಜಿ ತೂಕವಿದೆ.

ಹೊಸ 'ಮಾರುತಿ ಸುಜುಕಿ ವ್ಯಾಗನ್ಆರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ ಹಾಗೂ 89 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ ಮತ್ತು 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Maruti Suzuki WagonR CY2025 Sales Every Day 532 Cars Delivery

ಇನ್ನೊಂದು 1-ಲೀ. ಸಿಎನ್‌ಜಿ ಎಂಜಿನ್‌, 57 ಪಿಎಸ್ ಅಶ್ವ ಶಕ್ತಿ ಮತ್ತು 82 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 23 ರಿಂದ 34 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ.

ಈ ಕಾರು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ 'ಮಾರುತಿ ವ್ಯಾಗನ್ಆರ್' 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.73 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Saturday, January 24, 2026, 13:49 [IST]
English summary
Maruti suzuki wagonr cy2025 sales every day 532 cars delivery
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+