ವೈದ್ಯರು & ಎಂಜಿನಿಯರ್‌ಗಳ ನೆಚ್ಚಿನ ಕಾರಿದು.. 34 Km ಮೈಲೇಜ್, ರೂ.4.99 ಲಕ್ಷ.. ಜನ ಮುಗಿಬಿದ್ದು ಖರೀದಿ!
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ವೈದ್ಯರು ಹಾಗೂ ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಅದು ಕಳೆದ ತಿಂಗಳು (ಡಿಸೆಂಬರ್-2025) ಮುಂದುವರಿದಿದೆ. ಒಟ್ಟು 14,600 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ನವೆಂಬರ್‌ನಲ್ಲಿ 14,619 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದೇ 'ವ್ಯಾಗನ್ಆರ್' ಕಾರಿಗೆ ದಶಕಗಳಿದಲ್ಲೂ ಬೇಡಿಕೆಯಿದ್ದು, 1999ರಲ್ಲಿ ಬಿಡುಗಡೆಗೊಳಿಸಲಾಯಿತು. ಈವರೆಗೆ ಸರಿ ಸುಮಾರು 34 ಲಕ್ಷ ಯುನಿಟ್‌ಗಳನ್ನು ಮಾರಲಾಗಿದೆ.
ನೂತನ 'ಮಾರುತಿ ವ್ಯಾಗನ್ಆರ್' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಮಧ್ಯಮ ಹಾಗೂ ಮೇಲ್ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಮನೆಗೆ ತರಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು ಸಾಕಷ್ಟು ದೊಡ್ಡದಾಗಿರುವ 13 ಅಥವಾ 14 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಇದು ತುಂಬಾ ವಿಶಾಲವಾಗಿದೆ. 3,655 ಮಿ.ಮೀ ಉದ್ದ, 1,620 ಮಿ.ಮೀ ಅಗಲ ಹಾಗೂ 1,675 ಮಿ.ಮೀ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 850 ಕೆಜಿ ತೂಕವಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ವ್ಯಾಗನ್ಆರ್' ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 67 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಪೆಟ್ರೋಲ್ ಎಂಜಿನ್, 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಇನ್ನೊಂದು 1-ಲೀಟರ್ ಸಿಎನ್‌ಜಿ ಎಂಜಿನ್, 57 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 12.73 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಸುರಕ್ಷತೆಗೂ ಹೆಸರುವಾಸಿಯಾಗಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್-ಡಿಸೆಂಟ್ ಕಂಟ್ರೋಲ್, ಸೀಟ್ ಬೆಲ್ಟ್ ವಾರ್ನಿಂಗ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








