ಬಡವರ ಪಾಲಿನ ಅಂಬಾರಿ.. ಬರೀ 4.99 ಲಕ್ಷ ರೂಪಾಯಿಗೆ ಸಿಗುತ್ತೆ, 34 Km ಮೈಲೇಜ್.. 5-ಸೀಟರ್!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರನ್ನು ದೇಶೀಯ ಮಾರುಕಟ್ಟೆಯಲ್ಲಿ 1999ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಬಾರೀ ಬೇಡಿಕೆಯನ್ನು ಹೊಂದಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಇದೇ 'ವ್ಯಾಗನ್ಆರ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರತಿಯೊಂದು ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಇದು ಅಗ್ಗದ ದರದಲ್ಲಿ ಲಭ್ಯವಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.4.99 ಲಕ್ಷದಿಂದ ರೂ.6.95 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ರೂ.5.89 ಲಕ್ಷದಿಂದ ರೂ.7.62 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

Maruti Suzuki WagonR Price Design Colours Engine Mileage Features And All Details

ವಿನ್ಯಾಸ & ಸುತ್ತಳತೆ (Design & Dimensions):

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 14 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೋಡಲು ಪುಟ್ಟ ಎಸ್‌ಯುವಿಯಂತೆ ಇದ್ದು, ಸಾಕಷ್ಟು ವಿಶಾಲವಾಗಿದೆ. 3,655 ಮಿ.ಮೀ ಉದ್ದ, 1,620 ಮಿ.ಮೀ ಅಗಲ ಹಾಗೂ 1,675 ಎಂಎಂ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಬಣ್ಣಗಳು (Colours):

ನೂತನ ವ್ಯಾಗನ್ಆರ್ ಕಾರು ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ, ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಸಿಂಗಲ್-ಟೋನ್ ಬಣ್ಣದೊಂದಿಗೂ ಸಿಗುತ್ತದೆ. ಇದರೊಂದಿಗೆ ಗ್ಯಾಲಂಟ್ ರೆಡ್ ವಿತ್ ಬ್ಲೂಯಿಶ್ ಬ್ಲ್ಯಾಕ್ ರೂಫ್ & ಮ್ಯಾಗ್ಮಾ ಗ್ರೇ ವಿತ್ ಬ್ಲ್ಯಾಕ್ ರೂಫ್ ಎಂಬ ಡುಯಲ್-ಟೋನ್ ಬಣ್ಣದ ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki WagonR Price Design Colours Engine Mileage Features And All Details

ಎಂಜಿನ್ (Engine):

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 12.73 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಮೈಲೇಜ್ (Mileage):

ಈ ಹ್ಯಾಚ್‌ಬ್ಯಾಕ್ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಪೆಟ್ರೋಲ್ ರೂಪದಲ್ಲಿ 23.56 ರಿಂದ 25.19 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 32 ಲೀಟರ್ ಸಾಮರ್ಥ್ಯದ ಟ್ಯಾಂಕ್‍ನ್ನು ಒಳಗೊಂಡಿದೆ. ಹಾಗೆಯೇ ಸಿಎನ್‌ಜಿ ಆಯ್ಕೆಯಲ್ಲಿ 34.05 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 9 ಕೆಜಿ ಸಂಗ್ರಹಣವಿರುವ ಟ್ಯಾಂಕ್‍ನ್ನು ಪಡೆದಿದೆ.

Maruti Suzuki WagonR Price Design Colours Engine Mileage Features And All Details

ಆಸನ ಆಯ್ಕೆ, ಬೂಟ್ ಸ್ಪೇಸ್ & ವೈಶಿಷ್ಟ್ಯಗಳು (Seating Capacity, Boot Space & Features):

ಹೊಸ 'ಮಾರುತಿ ವ್ಯಾಗನ್ಆರ್' ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯೂಸಿಕ್ ಸಿಸ್ಟಮ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಪವರ್ ವಿಂಡೋಗಳು, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್-ಹೋಲ್ಡ್ ಅಸಿಸ್ಟ್, ಸ್ಪೀಡ್ ಅಲರ್ಟ್ ಸಿಸ್ಟಮ್, ಸೀಟ್ ಬೆಲ್ಟ್ ವಾರ್ನಿಂಗ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, February 26, 2026, 18:00 [IST]
English summary
Maruti suzuki wagonr price design colours engine mileage features and all details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+