Maruti: ಮುಗಿಬಿದ್ದ ಜನ.. ಈ ಮಾರುತಿ ಎಂಪಿವಿ ಭಾರೀ ಸಂಖ್ಯೆಯಲ್ಲಿ ಸೇಲ್ಸ್.. 6-ಸೀಟರ್.. ರೂ.11 ಲಕ್ಷ.. 26 Km ಮೈಲೇಜ್!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಜನಮೆಚ್ಚಿದ ಫ್ಯಾಮಿಲಿ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿಯಲ್ಲಿ ತಿಂಗಳಲ್ಲೂ ಭಾರೀ ಸಂಖ್ಯೆಯೇ ಮಾರಾಟಗೊಂಡಿದೆ. ಒಟ್ಟು 3,633 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,878 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 93.45% ಬೆಳವಣಿಗೆಯಾಗಿದೆ.

ನೂತನ 'ಮಾರುತಿ ಎಕ್ಸ್ಎಲ್6' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದೊಂದು ಎಂಪಿವಿಯಾಗಿರುವ ಹಿನ್ನೆಲೆ, ಗರಿಷ್ಠ ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಿಂದಾಗಿ ಮಾರಾಟ ಸಂಖ್ಯೆಯು ಉತ್ತಮವಾಗಿದೆ ಎಂದು ವಿಶೇಷಿಸಲಾಗುತ್ತಿದೆ.

Maruti Suzuki XL6 Mpv February 2026 Sales Report

'ಮಾರುತಿ ಸುಜುಕಿ ಎಕ್ಸ್ಎಲ್6' ಹೇಗಿದೆ:

ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.11.52 ಲಕ್ಷ ಹಾಗೂ ಗರಿಷ್ಠ ರೂ.14.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಟಾ, ಆಲ್ಫಾ ಮತ್ತು ಆಲ್ಫಾ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಈ ಎಂಪಿವಿ ಸಾಕಷ್ಟು ವಿಶಾಲವಾಗಿದೆ. 4,445 ಎಂಎಂ ಉದ್ದ, 1,775 ಎಂಎಂ ಅಗಲ ಹಾಗೂ 1,755 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2740 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki XL6 Mpv February 2026 Sales Report

ನೂತನ 'ಮಾರುತಿ ಎಕ್ಸ್ಎಲ್6' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 102 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,400 ಆರ್‌ಪಿಎಂನಲ್ಲಿ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 5,500 ಆರ್‌ಪಿಎಂನಲ್ಲಿ 87 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,200 ಆರ್‌ಪಿಎಂನಲ್ಲಿ 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಇದು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವುದೇ ಸಾಮಾನ್ಯ ಬೈಕ್‌ಗೆ ಕಮ್ಮಿಯಿಲ್ಲದ ರೀತಿಯಲ್ಲಿ 20.97 ರಿಂದ 26.32 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

Maruti Suzuki XL6 Mpv February 2026 Sales Report

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 6 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲೆಗೇಜ್ ತೆಗೆದುಕೊಂಡು ಹೋಗಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ 'ಮಾರುತಿ ಎಕ್ಸ್ಎಲ್6' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Friday, March 13, 2026, 11:13 [IST]
English summary
Maruti suzuki xl6 mpv february 2026 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+