Maruti: 6-ಸೀಟರ್.. 26.32 Km ಮೈಲೇಜ್, 11 ಲಕ್ಷ.. ಈ ಪ್ರಖ್ಯಾತ ಮಾರುತಿ MPV ಕುರಿತ ಪ್ರಮುಖಾಂಶಗಳು!

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಪ್ರಮುಖ ಎಂಪಿವಿ ಆಗಿ ಹೊರಹೊಮ್ಮಿದೆ. ಇದು ಫ್ಯಾಮಿಲಿ ಕಾರಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೋಡಲು ತುಂಬಾ ಚೆನ್ನಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಎಕ್ಸ್ಎಲ್6' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಎಂಪಿವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಮಾರುತಿ ಎಕ್ಸ್ಎಲ್6' ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. ರೂ.11.52 ಲಕ್ಷದಿಂದ ರೂ.14.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಜಿಟಾ (Zeta), ಆಲ್ಫಾ (Alpha) ಹಾಗೂ ಆಲ್ಫಾ ಪ್ಲಸ್ (Alpha Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki XL6 Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colors):

ಈ ಎಂಪಿವಿಯು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ & ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimensions):

ಇದು ಹೆಚ್ಚು ವಿಶಾಲವಾಗಿದೆ. 4,445 ಮಿ.ಮೀ ಉದ್ದ, 1775 ಮಿ.ಮೀ ಅಗಲ ಮತ್ತು 1755 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2740 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,765 ಕೆಜಿ ತೂಕವಿದೆ.

Maruti Suzuki XL6 Price Design Colours Engine Mileage Features And All Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ 'ಎಕ್ಸ್ಎಲ್6' ಎಂಪಿವಿಯು ದೊಡ್ಡದಾಗಿರುವ ಕ್ಯಾಬಿನ್‌ನ್ನು ಹೊಂದಿದೆ. 6 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲೆಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 102 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀ. ಸಿಎನ್‌ಜಿ ಎಂಜಿನ್ 87 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Maruti Suzuki XL6 Price Design Colours Engine Mileage Features And All Details

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.97 ರಿಂದ 26.32 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಇದು ಹತ್ತಾರು ನವೀನತೆಗಳಿಗೂ ಸಾಕ್ಷಿಯಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ 'ಮಾರುತಿ ಎಕ್ಸ್ಎಲ್6' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Sunday, February 15, 2026, 8:25 [IST]
English summary
Maruti suzuki xl6 price design colours engine mileage features and all details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+