ರಸ್ತೆ ಮೇಲಿನ ಅರಮನೆಯಂತಿರುವ ದೈತ್ಯ ಎಂಪಿವಿ ಬಿಡುಗಡೆ.. 6-ಸೀಟರ್, ಬೆಲೆ ಎಷ್ಟು.. ಹೇಗಿದೆ?
ಹೊಚ್ಚ ಹೊಸ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ (Mercedes-Benz V-Class) ಎಂಪಿವಿ ಸೋಮವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಸರಿ ಸುಮಾರು 4 ವರ್ಷಗಳ ನಂತರ ದೇಶೀಯ ಮಾರುಕಟ್ಟೆಗೆ ಪುನರಾಗಮನವಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ನವೀನತೆಗಳಿಗೂ ಸಾಕ್ಷಿಯಾಗಿದೆ. ಟೊಯೊಟಾ ವೆಲ್‌ಫೈರ್ ಹಾಗೂ ಲೆಕ್ಸಸ್ ಎಲ್ಎಂಗಳಿಗೆ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಬನ್ನಿ, ಈ ಎಂಪಿವಿ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ 'ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್' ಎಂಪಿವಿಯು ದುಬಾರಿ ದರವನ್ನು ಹೊಂದಿದೆ ರೂ.1.40 ಕೋಟಿ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ವಿ300 (V300) ಹಾಗೂ ವಿ300 ಡಿ (V300 d) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಇಲ್ಯುಮಿನೇಟ್ ಫ್ರಂಟ್ ಗ್ರಿಲ್, ಡುಯಲ್-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗಳು, ಪವರ್ಡ್ ಸ್ಲೈಡಿಂಗ್ ರೇರ್ ಡೋರ್‌ಗಳು, ಸ್ಪ್ಲಿಟ್ ಟೈಲ್‌ಗೇಟ್, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ರಾಕ್ ಕ್ರಿಸ್ಟಲ್ ವೈಟ್, ಅಬ್ಸಿಡಿಯನ್ ಬ್ಲ್ಯಾಕ್, ಸೋಡಾಲೈಟ್ ಬ್ಲೂ, ಆಲ್ಪೈನ್ ಗ್ರೇ ಮತ್ತು ಹೈ-ಟೆಕ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ 'ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್' ಸಾಕಷ್ಟು ವಿಶಾಲವಾಗಿದೆ. 5,370 ಮಿ.ಮೀ ಉದ್ದ, 1,928 ಮಿ.ಮೀ ಅಗಲ ಹಾಗೂ 1,880 ಮಿ.ಮೀ ಎತ್ತರವಿದೆ. ಜೊತೆಗೆ 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 3,430 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಎಂಪಿವಿಯು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರಲ್ಲಿರುವ 2-ಲೀಟರ್ ಮೈಲ್ಡ್ ಹೈಬ್ರಿಡ್ ಟರ್ಬೊ ಪೆಟ್ರೋಲ್ ಎಂಜಿನ್, 228 + 20 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 370 + 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 2-ಲೀಟರ್ ಡೀಸೆಲ್ ಎಂಜಿನ್, 237 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 4 ಅಥವಾ 6 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 500 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ 'ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್' ಎಂಪಿವಿಯು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 12.3-ಇಂಚಿನ ಡಿಸ್‌ಪ್ಲೇಗಳು, ಬಿಲ್ಟ್-ಇನ್ ನ್ಯಾವಿಗೇಷನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೇ ಮರ್ಸಿಡಿಸ್ ವಾಯ್ಸ್ ಅಸಿಸ್ಟೆಂಟ್, ವೈರ್‌ಲೆಸ್ ಫೋನ್ ಚಾರ್ಜರ್, ಮಲ್ಟಿ ಯುಎಸ್‌ಬಿ-ಸಿ ಪೋರ್ಟ್‌ಗಳು, ಕನೆಕ್ಟ್ಡ್ ಕಾರ್ ಟೆಕ್, 15-ಸ್ಪೀಕರ್ ಬರ್ಮೆಸ್ಟರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಸೀಟ್‌ಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








