ಹೊಸ ಎಂಜಿ Suv ಕುರಿತ ಪ್ರಮುಖಾಂಶಗಳು.. 7-ಸೀಟರ್.. ನಿನ್ನೆ ಪರಿಚಯ!
2026ರ ನೂತನ ಎಂಜಿ ಮೆಜೆಸ್ಟರ್ (MG Majestor) ಎಸ್‌ಯುವಿ ಗುರುವಾರ ಅನಾವರಣಗೊಂಡಿದೆ. ಈಗಾಗಲೇ ಪ್ರಿ-ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.41,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದು. ನೀವು ಹೊಚ್ಚ ಹೊಸ ಫುಲ್-ಸೈಜ್ ಎಸ್‌ಯುವಿಯೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಮೆಜೆಸ್ಟರ್' ಬೆಸ್ಟ್ ಚಾಯ್ಸ್ ಆಗಲಿದೆ. ನಾವಿಲ್ಲಿ ಈ ಕಾರಿನ ನಿರಿಕ್ಷಿತ ಬೆಲೆ ಹಾಗೂ ವಿಶೇಷತೆಗಳ ಕುರಿತಾದ 5 ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಕನಿಷ್ಠ ರೂ.40 ಲಕ್ಷ ಹಾಗೂ ಗರಿಷ್ಠ ರೂ.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಶಾರ್ಪ್ 4x2, ಶಾರ್ಪ್ 4x4 ಮತ್ತು ಸ್ಯಾವಿ 4x4 ಎಂಬ 3 ಆಕರ್ಷಕವಾದ ರೂಪಾಂತರಗಳೊಂದಿಗೂ ಲಭ್ಯವಿದೆ.

ವಿನ್ಯಾಸ (Design):
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 9-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಲ್ ಬ್ಲ್ಯಾಕ್, ಪರ್ಲ್ ವೈಟ್, ಮೆಟಲ್ ಆಶ್ & ಕಾಂಕ್ರೀಟ್ ಗ್ರೇ ಎಂಬ 4 ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಎಂಜಿ ಮೆಜೆಸ್ಟರ್' ಸಾಕಷ್ಟು ವಿಶಾಲವಾಗಿದೆ. 5,046 ಮಿ.ಮೀ ಉದ್ದ, 2,016 ಮಿ.ಮೀ ಅಗಲ ಹಾಗೂ 1,876 ಮಿ.ಮೀ ಎತ್ತರವಿದೆ. ಜೊತೆಗೆ 219 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,950 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2,550 ಕೆಜಿ ತೂಕವಿರಲಿದೆ ಎಂದು ಅಂದಾಜಿಸಲಾಗಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 343 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.0-ಲೀ. ಟ್ವಿನ್-ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ಇದು 4,000 ಆರ್‌ಪಿಎಂನಲ್ಲಿ 213 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 2,400 ಆರ್‌ಪಿಎಂನಲ್ಲಿ 478 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 10 ರಿಂದ 12 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುವ ನಿರೀಕ್ಷೆಯಿದೆ.

ವೈಶಿಷ್ಟ್ಯಗಳು (Features):
ಹೊಸ 'ಎಂಜಿ ಮೆಜೆಸ್ಟರ್' ಕ್ಯಾಬಿನ್ ವಿನ್ಯಾಸವು ಅದ್ಭುತವಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ವೈರ್‌ಲೆಸ್ ಚಾರ್ಜರ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್, 12-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಒಟ್ಟಾರೆಯಾಗಿ, ನೂತನ 'ಎಂಜಿ ಮೆಜೆಸ್ಟರ್' ಎಸ್‌ಯುವಿ ಅನಾವರಣಗೊಂಡಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಏಪ್ರಿಲ್ ತಿಂಗಳಲ್ಲಿ ಕಾರಿನ ಬೆಲೆಯನ್ನು ಘೋಷಣೆ ಮಾಡಲಾಗುತ್ತದೆ. ಮೇ ತಿಂಗಳಲ್ಲಿ ವಿತರಣೆಗಳು ಪ್ರಾರಂಭವಾಗಲಿದೆ. ಆ ಬಳಿಕ ಖರೀದಿದಾರರಿಂದ 'ಮೆಜೆಸ್ಟರ್'ಗೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








