Isuzu: ಹೊಸ ಬಾಹುಬಲಿ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?
ಇಸುಜು ಇಂಡಿಯಾ (Isuzu India) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿಂದು 2026ರ ಹೊಚ್ಚ ಹೊಸ ವಿ-ಕ್ರಾಸ್ (V-Cross) ಪಿಕ್ಅಪ್ ಟ್ರಕ್‌ನ್ನು ಬಿಡುಗಡೆಗೊಳಿಸಲಾಗಿದೆ. ಇದು ಹಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ ಇಸುಜು ವಿ-ಕ್ರಾಸ್ (Isuzu V-Cross) ಪಿಕ್ಅಪ್ ಟ್ರಕ್ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.25.50 ಲಕ್ಷ ಹಾಗೂ ಗರಿಷ್ಠ ರೂ.30.28 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಮಾರಾಟಕ್ಕೆ ಬಂದಿದ್ದು, ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಮುಂಭಾಗ (ಫ್ರಂಟ್) ಬ್ಲ್ಯಾಕ್ ಕಲರ್ ಗ್ರಿಲ್ ಮತ್ತು ನವೀನವಾದ ಬಂಪರ್‌ನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹಿಂಭಾಗ (ರೇರ್) ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ.
ಈ ಕಾರು ಸಿಲ್ಕಿ ವೈಟ್ ಪರ್ಲ್, ಬ್ಲ್ಯಾಕ್ ಮೈಕಾ, ರೆಡ್ ಸ್ಪಿನೆಲ್ ಮೈಕಾ, ನಾಟಿಲಸ್ ಬ್ಲ್ಯೂ, ಗಲೆನಾ ಗ್ರೇ, ಸಿಲ್ವರ್ ಮೆಟಾಲಿಕ್ ಮತ್ತು ಸ್ಪ್ಲಾಶ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಹೆಚ್ಚು ವಿಶಾಲ ಗಾತ್ರದಲ್ಲಿದೆ. 5,332 ಮಿ.ಮೀ ಉದ್ದ, 1,880 ಮಿ.ಮೀ ಅಗಲ ಮತ್ತು 1,855 ಮಿ.ಮೀ ಎತ್ತರವಿದೆ. 225 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 3,095 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,990 ಕೆಜಿ ತೂಕವಿದೆ.

ಹೊಸ 'ಇಸುಜು ವಿ-ಕ್ರಾಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.9-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 3,600 ಆರ್‌ಪಿಎಂನಲ್ಲಿ 161 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 2,500 ಆರ್‌ಪಿಎಂನಲ್ಲಿ 360 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 4ಡಬ್ಲ್ಯೂಡಿ (4 ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ. 12.4 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 55 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 13 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ 'ಇಸುಜು ವಿ-ಕ್ರಾಸ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6-ವೇ ಪವರ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್ ಹಾಗೂ 8-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








