Kia: ಪ್ರತಿಸ್ಪರ್ಧಿಗಳಿಗೆ ಶುರುವಾಯ್ತು ನಡುಕ.. ಬರೀ 10.99 ಲಕ್ಷ, 2026ರ ಹೊಸ ಕಿಯಾ SUV ಬಿಡುಗಡೆ
ಹೊಸ ತಲೆಮಾರಿನ ಕಿಯಾ ಸೆಲ್ಟೋಸ್ (New Generation Kia Seltos) ಎಸ್‌ಯುವಿ ಶುಕ್ರವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಬನ್ನಿ, ನೂತನ 'ಸೆಲ್ಟೋಸ್' ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೊಚ್ಚ ಹೊಸ 'ಕಿಯಾ ಸೆಲ್ಟೋಸ್' ಕನಿಷ್ಠ ರೂ.10,99 ಲಕ್ಷ ಗರಿಷ್ಠ ರೂ.19,99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ (ಎ), ಜಿಟಿಎಕ್ಸ್, ಜಿಟಿಎಕ್ಸ್ (ಎ) ಮತ್ತು ಎಕ್ಸ್-ಲೈನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದೆ. ಆಸಕ್ತರು ರೂ.25,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದಾಗಿದೆ.

ಈ ಕಾರು ಜಬರ್ದಸ್ತ್ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಬಂಪರ್, ಟೈಗರ್ ನೋಸ್ ಗ್ರಿಲ್, ಎಲ್ಇಡಿ ಪ್ರೊಜೆಕ್ಷನ್ ಹೆಡ್‌ಲ್ಯಾಂಪ್‌ಗಳು, ಸ್ಟಾರ್ ಮ್ಯಾಪ್ ಎಲ್ಇಡಿ ಡಿಆರ್‌ಎಲ್‌ಗಳು, ಕನೆಕ್ಟ್ಡ್ ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳು ಹಾಗೂ 17/18-ಇಂಚಿನ ಕ್ರಿಸ್ಟಲ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ, ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ 'ಕಿಯಾ ಸೆಲ್ಟೋಸ್' ಸಾಕಷ್ಟು ವಿಶಾಲವಾಗಿರುವ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. 4,460 ಎಂಎಂ ಉದ್ದ, 1,830 ಎಂಎಂ ಅಗಲ ಮತ್ತು 1,635 ಎಂಎಂ ಎತ್ತರವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,690 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

ಹೊಸ 'ಕಿಯಾ ಸೆಲ್ಟೋಸ್' ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಬಲ್ಲದು. 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ಹ್ಯುಂಡೈ ಕ್ರೆಟಾ (Hyundai Creta), ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder), ಎಂಜಿ ಹೆಕ್ಟರ್ (MG Hector) ಹಾಗೂ ಹೋಂಡಾ ಎಲಿವೇಟ್ (Honda Elevate) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








