Toyota: ಸಿದ್ಧರಾಗಿ.. ಅತಿ ಶೀಘ್ರದಲ್ಲೇ 3 ಹೊಸ ಟೊಯೊಟಾ ಕಾರುಗಳು ಬಿಡುಗಡೆ.. ಯಾವುವು?

ಟೊಯೊಟಾ (Toyota) ಜನಮೆಚ್ಚಿದ ವಾಹನ ತಯಾರಕ ಕಂಪನಿಯಾಗಿ ಎಂದೇ ಮನೆ ಮಾತಾಗಿದೆ. ಈ 2026 ಕಂಪನಿಗೆ ಬಹುಮುಖ್ಯ ವರ್ಷವಾಗಿದ್ದು, 3 ನವೀನ ಕಾರುಗಳನ್ನು ಪರಿಚಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅತಿ ಶೀಘ್ರದಲ್ಲೇ ಅರ್ಬನ್ ಕ್ರೂಸರ್ ಎಬೆಲ್ಲಾ, ಹೊಸ ತಲೆಮಾರಿನ ಅರ್ಬನ್ ಕ್ರೂಸರ್ ಹೈರೈಡರ್ & ಫಾರ್ಚೂನರ್ ಎಸ್‌ಯುವಿಗಳನ್ನು ಮಾರಾಟಕ್ಕೆ ತರಲಿದೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ (Toyota Urban Cruiser Ebella):

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ತಿಂಗಳೇ ಬಿಡುಗಡೆಯಾಗುವ ನೀರಿಕ್ಷೆಯಿದೆ. ಕನಿಷ್ಠ ರೂ.18 ಲಕ್ಷ ಮತ್ತು ಗರಿಷ್ಠ ರೂ.21 ಲಕ್ಷ ದರವನ್ನು ಪಡೆದಿರುವ ನಿರೀಕ್ಷೆಯಿದೆ. ಜನವರಿಯಲ್ಲಿ ಅನಾವರಣಗೊಳಿಸಲಾಗಿತ್ತು. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದ್ದು, ಹೆಚ್ಚು ವಿಶಾಲವಾಗಿದೆ. 4,285 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,640 ಎಂಎಂ ಎತ್ತರವಿದೆ.

New 3 Toyota Cars launch In 2026 Urban Cruiser Ebella New Gen Urban Cruiser Hyryder And Fortuner

ಈ ಕಾರು ಕೆಫೆ ವೈಟ್, ಬ್ಲ್ಯೂಯಿಶ್ ಬ್ಲ್ಯಾಕ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್ ಮತ್ತು ಲ್ಯಾಂಡ್ ಬ್ರೀಜ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಮಲ್ಟಿ ಯುಎಸ್‌‍ಬಿ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತುಆಲ್-ವೀಲ್ ಬ್ರೇಕ್‌ಗಳನ್ನು ಒಳಗೊಂಡಿದೆ.

New 3 Toyota Cars launch In 2026 Urban Cruiser Ebella New Gen Urban Cruiser Hyryder And Fortuner

ಹೊಸ ತಲೆಮಾರಿನ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (New Gen Toyota Urban Cruiser Hyryder):

ಇದು ಎಸ್‌ಯುವಿಯಾಗಿದೆ. ನವೀಕರಿಸಿದ ರೂಪದಲ್ಲಿ ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಂದರೆ ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಹೊಂದಿರಲಿದೆ. ವಿಶೇಷವಾಗಿ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿರಬಹುದು ಎನ್ನಲಾಗಿದೆ.

ಪ್ರಸ್ತುತ ಗ್ರಾಹಕರ ಖರೀದಿಗೆ ಲಭ್ಯವಿರುವ 'ಅರ್ಬನ್ ಕ್ರೂಸರ್ ಹೈರೈಡರ್' ರೂ.10.99 ಲಕ್ಷದಿಂದ ರೂ. 20.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ & 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19.39 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

New 3 Toyota Cars launch In 2026 Urban Cruiser Ebella New Gen Urban Cruiser Hyryder And Fortuner

ಮುಂದಿನ ಪೀಳಿಗೆಯ ಟೊಯೊಟಾ ಫಾರ್ಚೂನರ್ (Next Gen Toyota Fortuner):

ಇದೊಂದು ಫುಲ್-ಸೈಜ್ ಎಸ್‌ಯುವಿಯಾಗಿದೆ. ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ (ಅಕ್ಟೋಬರ್‌ನಿಂದ ಡಿಸೆಂಬರ್) ಬಿಡುಗಡೆಗೊಳಿಸುವ ನಿರೀಕ್ಷೆಯಿದೆ. ಈಗಾಗಲೇ ಪ್ರಾಯೋಗಿಕ ಸಂಚಾರವನ್ನು ನಡೆಸವಾಗಲು ಕಾಣಿಸಿಕೊಂಡಿದ್ದು, ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳಿರಲಿವೆ. ಜೊತೆಗೆ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಸದ್ಯ, ದೇಶೀಯವಾಗಿ ಖರೀದಿಗೆ ಸಿಗುವ 'ಫಾರ್ಚೂನರ್' ರೂ.33.65 ಲಕ್ಷದಿಂದ ರೂ.48.85 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.8-ಲೀ. ಮೈಲ್ಡ್ ಹೈಬ್ರಿಡ್ ಡೀಸೆಲ್, 2.8-ಲೀ. ಡೀಸೆಲ್ ಮತ್ತು 2.7-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 10.3 ರಿಂದ 14 ಕಿ.ಮೀ ವರೆಗೆ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Sunday, March 8, 2026, 21:05 [IST]
English summary
New 3 toyota cars launch in 2026 urban cruiser ebella new gen urban cruiser hyryder and fortuner
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+