ತಾಕತ್ತು ಪ್ರದರ್ಶನಕ್ಕೆ ಹೊಸ ಕಂಪನಿಯ ಸಿದ್ಧತೆ.. ಅತಿ ಶೀಘ್ರದಲ್ಲೇ 3 ಕಾರುಗಳು ಮಾರಾಟಕ್ಕೆ.. 450 ಕಿ.ಮೀವರೆಗೆ ರೇಂಜ್!

ವಿನ್‌ಫಾಸ್ಟ್‌ (VinFast) ಜಾಗತಿಕವಾಗಿ ಹೆಸರುವಾಸಿಯಾಗಿರುವ ವಾಹನ ತಯಾರಕ ಕಂಪನಿಯಾಗಿದೆ. 2025ರ ಸೆಪ್ಟೆಂಬರ್‌ನಲ್ಲಿ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ವಿಎಫ್6 ಮತ್ತು ವಿಎಫ್7 ಹೆಸರಿನ 2 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೂ ತಂದಿತ್ತು. ಸದ್ಯ, ಕಂಪನಿಯು ನೂತನ ಲಿಮೋ ಗ್ರೀನ್‌, ವಿಎಫ್3 ಹಾಗೂ ವಿಎಫ್5 ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಇವು ಒಂದಕ್ಕಿಂತ ಒಂದು ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ.

ವಿನ್‌ಫಾಸ್ಟ್‌ ಲಿಮೋ ಗ್ರೀನ್‌ (VinFast Limo Green):

ಇದೊಂದು ಎಲೆಕ್ಟ್ರಿಕ್ ಎಂಪಿವಿಯಾಗಿದೆ. ಈ ಫೆಬ್ರವರಿಯಲ್ಲಿಯೇ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ. ರೂ.22 ಲಕ್ಷದಿಂದ ರೂ.26 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಈಗಾಗಲೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಡೀಪ್ ಓಷನ್, ಡೆಸಾಟ್ ಸಿಲ್ವರ್, ನೆಪ್ಚೂನ್ ಗ್ರೇ, ಸನ್‌ಸೆಟ್ ಆರೆಂಜ್ ಹಾಗೂ ಜೆಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

New 3 Vinfast Cars Launch Soon In India Limo Green VF3 And VF5

ಈ ಕಾರು ಹೆಚ್ಚು ವಿಶಾಲವಾಗಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,840 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರಯಾಣಿಸುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 285 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ 'ಲಿಮೋ ಗ್ರೀನ್‌' ಎಂಪಿವಿ 60.13 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 450 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 10.1-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 4-ಏರ್‌ಬ್ಯಾಗ್‌ಗಳು & ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

New 3 Vinfast Cars Launch Soon In India Limo Green VF3 And VF5

ವಿನ್‌ಫಾಸ್ಟ್ ವಿಎಫ್3 (VinFast VF3):

ಇದು ಪುಟ್ಟ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ ಆಗಿದ್ದು, ಈ ವರ್ಷದ ಮೇ ತಿಂಗಳಲ್ಲಿಯೇ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ರೂ.7.50 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಜಾಗತಿಕವಾಗಿಯೂ ದೊರೆಯಲಿದ್ದು, ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲೆಕ್ಟ್ರಿಕ್ ಬ್ಲೂ, ಅರ್ಬನ್ ಮಿಂಟ್, ಸಮ್ಮರ್ ಯೆಲ್ಲೋ ಮತ್ತು ರೋಸ್ ಪಿಂಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ವಿನ್‌ಫಾಸ್ಟ್ ವಿಎಫ್3' ಕಾರು 18.64 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 215 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 4 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಮತ್ತು ಮ್ಯಾನುವಲ್ ಎಸಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು ಹಾಗೂ ರೇರ್-ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

New 3 Vinfast Cars Launch Soon In India Limo Green VF3 And VF5

ವಿನ್‌ಫಾಸ್ಟ್‌ ವಿಎಫ್5 (Vinfast VF5):

ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ ಸಹ ಇದೇ 'ಮೇ'ನಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ರೂ.10 ಲಕ್ಷದಿಂದ ರೂ.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯವಾಗಿಯೂ ಲಭ್ಯವಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಬ್ರಾಹಿಮ್ನಿ ವೈಟ್, ಕ್ರಿಮ್ಸನ್ ರೆಡ್, ನೆಪ್ಚೂನ್ ಗ್ರೇ ಹಾಗೂ ವಿನ್‌ಫಾಸ್ಟ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ವಿನ್‌ಫಾಸ್ಟ್‌ ವಿಎಫ್5' ಕಾರು 29.6 ಮತ್ತು 37.23 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 269 ರಿಂದ 326 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 4-ಏರ್‌ಬ್ಯಾಗ್‌ಗಳು ಹಾಗೂ ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್‌ನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, January 30, 2026, 15:43 [IST]
English summary
New 3 vinfast cars launch soon in india limo green vf3 and vf5
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+