Tata: ಪ್ರತಿಸ್ಪರ್ಧಿಗಳಿಗೆ ನಡುಕ.. ಟಾಟಾದಿಂದ 4 ಹೊಸ ಎಸ್‌ಯುವಿಗಳ ಬಿಡುಗಡೆಗೆ ತಯಾರಿ, ಯಾವುವು.. ಬೆಲೆ ಎಷ್ಟು?

ನಂಬಿಕೆಗೆ ಮತ್ತೊಂದು ಹೆಸರೇ ಟಾಟಾ ಮೋಟಾರ್ಸ್ (Tata Motors). ಅಷ್ಟರಮಟ್ಟಿಗೆ ಈ ಕಂಪನಿಯು ಜನಪ್ರಿಯತೆ ಗಳಿಸಿದೆ. '2026' ಟಾಟಾಗೆ ಮಹತ್ವದ ವರ್ಷವಾಗಿದೆ. 4 ನೂತನ ಎಸ್‌ಯುವಿಗಳನ್ನು ಮಾರಾಟಕ್ಕೆ ತರಲಿದೆ. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಇದೇ ವರ್ಷ ಸಿಯೆರಾ ಇವಿ, ಪಂಚ್ ಇವಿ ಫೇಸ್‌ಲಿಫ್ಟ್, ಅವಿನ್ಯಾ ಇವಿ ಹಾಗೂ ಹೊಸ ತಲೆಮಾರಿನ ನೆಕ್ಸಾನ್ ಕಾರುಗಳು ಬಿಡುಗಡೆಗೊಳ್ಳಲಿವೆ. ಬನ್ನಿ, ಇವುಗಳು ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಸಿಯೆರಾ ಇವಿ (Tata Sierra EV):

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರಿನ ಮೇಲೆ ಗ್ರಾಹಕರು ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ ಪರಿಚಯಗೊಳ್ಳುವ ಸಾಧ್ಯತೆಯಿದೆ. ರೂ.20 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಟ್ಯಾಂಡರ್ಡ್ 'ಸಿಯೆರಾ'ದಂತೆ ವಿನ್ಯಾಸವನ್ನು ಹೊಂದಿರಲಿದೆ. 5 ಆಸನಗಳನ್ನು ಒಳಗೊಂಡಿರಲಿದೆ.

New 4 Tata SUVs Launch In 2026 Sierra EV Punch EV Facelift Avinya EV And Updated Nexon

ನೂತನ 'ಸಿಯೆರಾ ಇವಿ' ಶಕ್ತಿಯುತವಾದ 65 ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಈಗಿರುವ 'ಸಿಯೆರಾ'ದ ರೀತಿಯಲ್ಲಿಯೇ ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿರಲಿದೆ.

ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift):

ಸದ್ಯ, ಸ್ಟ್ಯಾಂಡರ್ಡ್ 'ಟಾಟಾ ಪಂಚ್ ಫೇಸ್‌ಲಿಫ್ಟ್'ನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ, ಪಂಚ್ ಇವಿಯನ್ನು ನವೀಕರಿಸಿ ಮಾರಾಟಕ್ಕೆ ತರಬಹುದು ಎನ್ನಲಾಗಿದೆ. ಈ ವರ್ಷದ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ಖರೀದಿಗೆ ಲಭ್ಯವಾಗಬಹುದು. ಬೆಲೆಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬಹುದು. ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ಸಾಧ್ಯತೆಯಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿರಲಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದೆ.

New 4 Tata SUVs Launch In 2026 Sierra EV Punch EV Facelift Avinya EV And Updated Nexon

ಹೊಸ 'ಪಂಚ್ ಇವಿ ಫೇಸ್‌ಲಿಫ್ಟ್' ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಈಗಿರುವ ಮಾಡೆಲ್‌ನಂತೆ 25 ಮತ್ತು 35 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಲಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಟಾಟಾ ಅವಿನ್ಯಾ ಇವಿ (Tata Avinya EV):

ಇದು ಪ್ರಮುಖ ಕಾರಾಗಿದ್ದು, ಈ ವರ್ಷವೇ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ರೂ.30 ಲಕ್ಷದಿಂದ ರೂ.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿರಲಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗಲಿದೆ. 5 ಆಸನಗಳನ್ನು ಹೊಂದಿರಲಿದೆ.

New 4 Tata SUVs Launch In 2026 Sierra EV Punch EV Facelift Avinya EV And Updated Nexon

ನೂತನ 'ಅವಿನ್ಯಾ ಇವಿ' ಶಕ್ತಿಶಾಲಿಯಾದ 65 ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್ ಮತ್ತು 7-ಏರ್‌ಬ್ಯಾಗ್‌ಗಳನ್ನು ಪಡೆದಿರುವ ಸಾಧ್ಯತೆಯಿದೆ.

ಹೊಸ ತಲೆಮಾರಿನ ಟಾಟಾ ನೆಕ್ಸಾನ್ (New-Gen Tata Nexon):

ಈ ಎಸ್‌ಯುವಿಯು 2026ರ ಅಂತ್ಯದಲ್ಲಿ ಅಥವಾ 2027ರ ಆರಂಭದಲ್ಲಿ ಬಿಡುಗಡೆಗೊಳ್ಳಬಹುದು ಎನ್ನಲಾಗಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದೆ. ಇದು ರೂ.8 ಲಕ್ಷದಿಂದ ರೂ.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿರಲಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದೆ.

New 4 Tata SUVs Launch In 2026 Sierra EV Punch EV Facelift Avinya EV And Updated Nexon

ಹೊಸ 'ನೆಕ್ಸಾನ್' ಪವರ್‌ಟ್ರೇನ್‌ನಲ್ಲಿಯೂ ಮಾರ್ಪಾಡುಗಳಿರುವುದಿಲ್ಲ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿರಲಿದೆ. ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿರುವ ನಿರೀಕ್ಷೆಯಿದೆ.

More from DriveSpark

Article Published On: Friday, January 23, 2026, 13:28 [IST]
English summary
New 4 tata suvs launch in 2026 sierra ev punch ev facelift avinya ev and updated nexon
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+