ಈ 2026ರ ಫೆಬ್ರವರಿಯಲ್ಲಿ ಬಿಡುಗಡೆಗೊಂಡ ಹೊಸ ಕಾರುಗಳಿವು, ಬೆಲೆ ಇಷ್ಟೇನಾ.. ವಿಶೇಷತೆಗಳೇನು?
ಈ 2026ರ ಫೆಬ್ರವರಿಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಮಾರುತಿ ಇ ವಿಟಾರಾ, ನಿಸ್ಸಾನ್ ಗ್ರಾವೈಟ್, ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ ಹಾಗೂ ಫೋಕ್ಸ್‌ವ್ಯಾಗನ್ ಟೇರಾನ್ ಆರ್-ಲೈನ್ ಕಾರುಗಳು ಪ್ರಮುಖವಾಗಿವೆ. ಇವುಗಳು ಒಂದಕ್ಕಿಂದ ಒಂದು ಅದ್ಭುತವಾಗಿದ್ದು, ನೋಡಲು ಕೂಡ ಚೆನ್ನಾಗಿವೆ. ಬನ್ನಿ.. ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara):
ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.15.99 ಲಕ್ಷದಿಂದ ರೂ.20.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಲ್ಲಿಯೂ ಖರೀದಿಗೆ ಸಿಗುತ್ತದೆ. ಆ ಮಾಡೆಲ್ ರೂ.10.99 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ನೆಕ್ಸಾ ಬ್ಲ್ಯೂ, ಆಪುಲೆಂಟ್ ರೆಡ್ ಮತ್ತು ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇ-ವಿಟಾರಾ' 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 440 ರಿಂದ 543 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಫಿಕ್ಸೆಡ್ ಗ್ಲಾಸ್ ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ನಿಸ್ಸಾನ್ ಗ್ರಾವೈಟ್ (Nissan Gravite):
ಈ ಎಂಪಿವಿಯು ರೂ.5.65 ಲಕ್ಷದಿಂದ ರೂ.8.93 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಫಾರೆಸ್ಟ್ ಗ್ರೀನ್, ಓನಿಕ್ಸ್ ಬ್ಯ್ಲಾಕ್, ಮೆಟಾಲಿಕ್ ಗ್ರೇ, ಬ್ಲೇಡ್ ಸಿಲ್ವರ್ ಮತ್ತು ಸ್ಟಾರ್ಮ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,636 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಗ್ರಾವೈಟ್' 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19.3 ರಿಂದ 19.6 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಪ್ಯಾಡಲ್ ಶಿಫ್ಟರ್ಸ್ ಮತ್ತು ಮ್ಯಾನುವಲ್ ಎಸಿಯಂತಹ ವೈಶಿಷ್ಟ್ಯಗಳನ್ನುಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift):
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಡಿಯೂ ಲಭ್ಯವಾಗಲಿದ್ದು, ರೂ.6.49 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಸೂಪರ್‌ನೋವಾ ಕಾಪರ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 195 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಪಂಚ್ ಇವಿ' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಪೋಕ್ಸ್‌ವ್ಯಾಗನ್ ಟೇರಾನ್ ಆರ್-ಲೈನ್ (Volkswagen Tayron R-Line):
ಇದು ಫುಲ್-ಸೈಜ್ ಎಸ್‌ಯುವಿಯಾಗಿದೆ. ರೂ.46.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಅಲ್ಟ್ರಾ ವೈಲೆಟ್, ನೈಟ್‌ಶೇಡ್ ಬ್ಲೂ, ಸಿಪ್ರೆಸಿನೊ ಗ್ರೀನ್, ಗ್ರೆನಡಿಲ್ಲಾ ಬ್ಲ್ಯಾಕ್, ಓರಿಕ್ಸ್ ವೈಟ್ ಮತ್ತು ಡಾಲ್ಫಿನ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 181 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,789 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಟೇರಾನ್ ಆರ್-ಲೈನ್' 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 14 ರಿಂದ 15 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 15-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಟ್ರಿಪಲ್-ಜೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನೂ ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 9-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








