Kia: 10.99 ಲಕ್ಷ.. 5-ಸೀಟರ್, ಹೊಸ ಕಿಯಾ ಸೆಲ್ಟೋಸ್ ಕಾರಿನ ಆನ್-ರೋಡ್ ದರವೆಷ್ಟು.. EMI ಏನು?
ಈಚೆಗೆ ಹೊಸ ತಲೆಮಾರಿನ ಕಿಯಾ ಸೆಲ್ಟೋಸ್ (New-Gen Kia Seltos) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ರೂ.10.99 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಈ 'ಸೆಲ್ಟೋಸ್' ಎಸ್‌ಯುವಿಯು ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಕಾರಿನ ಆನ್-ರೋಡ್ ದರ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಹೊಸ 'ಕಿಯಾ ಸೆಲ್ಟೋಸ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಹೆಚ್‌ಟಿಇ (ಪೆಟ್ರೋಲ್) ರೂಪಾಂತರ, ರೂ.12.73 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.10.23 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.21,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ಹೆಚ್‌ಟಿಇ (ಡೀಸೆಲ್) ರೂಪಾಂತರ, ರೂ.16.17 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.13.67 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.28,000 ವರೆಗೆ ಇಎಂಐ ಪಾವತಿ ಮಾಡಬೇಕು.
ಇನ್ನೊಂದು ಹೆಚ್‌ಟಿಕೆ (ಡೀಸೆಲ್) ರೂಪಾಂತರ, ರೂ.17.34 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.14.84 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.30,000 ವರೆಗೆ ಇಎಂಐ ಕಟ್ಟಬೇಕು.

ಈ 'ಸೆಲ್ಟೋಸ್' ಕಾರಿನ ಜಿಟಿಎಕ್ಸ್ (ಪೆಟ್ರೋಲ್) ರೂಪಾಂತರ, ರೂ.21.22 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಸಿದರೆ, ರೂ.18.72 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.38,000 ವರೆಗೆ ಇಎಂಐ ಪಾವತಿಸಬೇಕು.
ಇದೇ ಎಸ್‌ಯುವಿಯ ಜಿಟಿಎಕ್ಸ್ (ಡೀಸೆಲ್) ರೂಪಾಂತರ, ರೂ.23.32 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2.50 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.20.82 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.42,000 ವರೆಗೆ ಇಎಂಐ ಕಟ್ಟಬೇಕು.

'ಕಿಯಾ ಸೆಲ್ಟೋಸ್' ವಿಶೇಷತೆಗಳೇನು:
ನೂತನ 'ಸೆಲ್ಟೋಸ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ, ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,690 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 447 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3 ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಈ ಎಸ್‌ಯುವಿಯ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಮತ್ತು ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








