7-ಸೀಟರ್.. ಬೆಲೆ ಇಷ್ಟೇನಾ! ಗಜ ಗಾತ್ರದ ಮಹೀಂದ್ರಾ SUVಗಾಗಿ ಬುಕ್ಕಿಂಗ್ ಶುರು.. ವಿಶೇಷತೆಗಳೇನು?

ಈಚೆಗೆ ನೂತನ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿತು. ಇದು 'ಎಕ್ಸ್‌ಯುವಿ700'ನ ಫೇಸ್‌ಲಿಫ್ಟ್ ಮಾಡೆಲ್ ಆಗಿದೆ. ನೋಡಲು ತುಂಬಾ ಚೆನ್ನಾಗಿದೆ. ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಈ ಕಾರಿಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್, ಹ್ಯುಂಡೈ ಅಲ್ಕಾಜರ್, ಮತ್ತು ಟಾಟಾ ಹ್ಯಾರಿಯರ್, ಟೊಯೊಟಾ ಇನ್ನೋವಾ ಹೈಕ್ರಾಸ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಇಂದಿನಿಂದ (ಜ.14) ಹೊಸ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ'ಗಾಗಿ ಬುಕ್ಕಿಂಗ್‌ನ್ನು ಶುರು ಮಾಡಲಾಗಿದೆ. ಆಸಕ್ತ ಗ್ರಾಹಕರು, ಸಮೀಪದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.21,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಜೊತೆಗೆ ಈ ದಿನವೇ ಪ್ರಿ-ಬುಕ್ಕಿಂಗ್ ಮಾಡಿದ ಖರೀದಿದಾರರಿಗೆ ಗರಿಷ್ಠ ಶ್ರೇಣಿ ರೂಪಾಂತರಗಳನ್ನು ಡೆಲಿವರಿ ಮಾಡಲಾಗುತ್ತದೆ. ಏಪ್ರಿಲ್‌ನಿಂದ ಆರಂಭಿಕ ಶ್ರೇಣಿ ಸೇರಿದಂತೆ ಎಲ್ಲ ರೂಪಾಂತರಗಳ ವಿತರಣೆಗೆ ಚಾಲನೆ ದೊರೆಯಲಿದೆ.

New Mahindra XUV 7XO Car Bookings Open Details

ಈ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.13.66 ಲಕ್ಷ ಮತ್ತು ಗರಿಷ್ಠ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ & ಎಎಕ್ಸ್7 ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಬುಲಾ ಬ್ಲ್ಯೂ, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

New Mahindra XUV 7XO Car Bookings Open Details

ಇದು 3 ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಈ ಕಾರಿನ 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 2.2-ಲೀ. ಡೀಸೆಲ್ ಎಂಜಿನ್, 185 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 450 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ 'ಎಕ್ಸ್‌ಯುವಿ 7ಎಕ್ಸ್ಒ' ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡುತ್ತದೆ. 195 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 9.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ ಎಂಬ ವಿವರಗಳು ದೊರೆತಿವೆ.

New Mahindra XUV 7XO Car Bookings Open Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ರೇರ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಇದು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ರೇರ್-ಪಾರ್ಕಿಂಗ್ ಸೆನ್ಸರ್‌ಗಳು, ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 540-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Wednesday, January 14, 2026, 16:25 [IST]
English summary
New mahindra xuv 7xo car bookings open details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+