ಹೊಸ ಮಹೀಂದ್ರಾ ಕಾರು ಶೋರೂಂಗೆ ಬಂದೇ ಬಿಡ್ತು.. ಅತಿ ಶೀಘ್ರದಲ್ಲೇ ವಿತರಣೆ, ಬೆಲೆ ಎಷ್ಟು.. ಹೇಗಿದೆ?

ಇದೇ ಜನವರಿ 5 ರಂದು ನೂತನ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಕಾರನ್ನು ಮಾರಾಟಕ್ಕೆ ತರಲಾಗಿದೆ. ಇದೊಂದು ಫ್ಯಾಮಿಲಿ ಎಸ್‌ಯುವಿಯಾಗಿದೆ. ಜನವರಿ 14 ರಿಂದ ಬುಕ್ಕಿಂಗ್ ಶುರುವಾಗಲಿದೆ. ಆಸಕ್ತರು ರೂ.21,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಆ ದಿನದಂದೇ ಪ್ರಿ-ಬುಕ್ಕಿಂಗ್ ಮಾಡಿದ ಖರೀದಿದಾರರಿಗೆ ಗರಿಷ್ಠ ಶ್ರೇಣಿ ರೂಪಾಂತರಗಳನ್ನು ವಿತರಿಸಲಾಗಿದೆ. ಏಪ್ರಿಲ್‌ನಿಂದ ಆರಂಭಿಕ ಶ್ರೇಣಿ ರೂಪಾಂತರಗಳ ಡಿಲೆವರಿಯನ್ನು ಪ್ರಾರಂಭಿಸಲಾಗುತ್ತದೆ. ಸದ್ಯ, ದೇಶಾದ್ಯಂತ ಶೋರೂಂಗಳಿಗೆ ಹೊಸ 'ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಗಳನ್ನು ತಲುಪಿಸುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಯು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಪರಿಚಯಾತ್ಮಕ ದರಗಳು ಮೊದಲ 40,000 ಕಾರುಗಳಿಗೆ ಮಾತ್ರ ಅನ್ವಯವಾಗಲಿದೆ.

New Mahindra XUV 7XO Car Starts Reaching Showrooms Details

ಇದು ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ ಹಾಗೂ ಎಎಕ್ಸ್7 ಎಲ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಮತ್ತು ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಕಾರು 'ಎಕ್ಸ್‌ಯುವಿ700'ನ ಫೇಸ್‌ಲಿಫ್ಟ್ ಮಾಡೆಲ್ ಆಗಿದೆ. ಅದಕ್ಕೆ ತಕ್ಕಂತೆ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,695 ಮಿ.ಮೀ ಉದ್ದ, 1,890 ಮಿ.ಮೀ ಅಗಲ ಹಾಗೂ 1755 ಮಿ.ಮೀ ಎತ್ತರವಿದೆ. ಜೊತೆಗೆ 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,750 ಕೆಜಿ ತೂಕವಿದೆ.

ಹೊಸ 'ಎಕ್ಸ್‌ಯುವಿ 7ಎಕ್ಸ್ಒ' ರೂಪಾಂತರಗಳಿಗೆ ಅನುಗುಣವಾಗಿ 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) & ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅದ್ಬುತವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ & ಕೋ-ಡ್ರೈವರ್ ಎಂಟರ್‌ಟೈನ್‌ಮೆಂಟ್ ಸಿಸ್ಟಮ್‌), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ವೆಂಟಿಲೇಟೆಡ್ ರೇರ್ ಸೀಟ್‌ಗಳು ಹಾಗೂ 540-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಟೋ ಹೋಲ್ಡ್‌, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಟಾಟಾ ಸಫಾರಿ (Tata Safari), ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Source Link: Carwale

More from DriveSpark

Article Published On: Monday, January 12, 2026, 13:24 [IST]
English summary
New mahindra xuv 7xo car starts reaching showrooms details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+