Mahindra: ನಿನ್ನೆಯಷ್ಟೇ ಬಿಡುಗಡೆ.. 13.66 ಲಕ್ಷ, 7-ಸೀಟರ್.. ಹೊಸ ಮಹೀಂದ್ರಾ ಎಸ್‌ಯುವಿ ಕುರಿತ ಪ್ರಮುಖಾಂಶಗಳು

ನಿನ್ನೆಯಷ್ಟೇ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು 'ಎಕ್ಸ್‌ಯುವಿ700'ನ ಫೇಸ್‌ಲಿಫ್ಟ್ ಮಾಡೆಲ್ ಆಗಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ನೂತನ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಎಕ್ಸ್‌ಯುವಿ 7ಎಕ್ಸ್ಒ' ಬೆಸ್ಚ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಇದೊಂದು ಫ್ಯಾಮಿಲಿ ಕಾರಾಗಿದ್ದು, ಸ್ವಲ್ಪ ಮಟ್ಟಿಗೆ ದುಬಾರಿಯಾಗಿದೆ. ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ ಹಾಗೂ ಎಎಕ್ಸ್7 ಎಲ್ ರೂಪಾಂತರಗಳೊಂದಿಗೂ ದೊರೆಯುತ್ತದೆ.

New Mahindra XUV 7XO Suv Top Things You Should Must Know

ವಿನ್ಯಾಸ (Design):

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಯು ನೋಡುಗರ ಕಣ್ಮನ ಸೆಳೆಯುವಂತಿದೆ. ಆದರೂ ಹಳೆಯ 'ಎಕ್ಸ್‌ಯುವಿ700'ಗೆ ಹೋಲಿಕೆ ಮಾಡಿದರೆ, ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ. ನವೀಕರಣಗೊಂಡಿರುವ ಗ್ರಿಲ್, ಮರುವಿನ್ಯಾಸಕ್ಕೆ ಒಳಪಟ್ಟ ಬಂಪರ್, ಹೊಸದಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಇದರೊಂದಿಗೆ ಬೃಹದಾಕಾರದ 19 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಸುತ್ತಳತೆ & ಬಣ್ಣಗಳು (Dimension & Colors):

ಈ ಕಾರು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,695 ಮಿ.ಮೀ ಉದ್ದ, 1,890 ಮಿ.ಮೀ ಅಗಲ ಮತ್ತು 1755 ಮಿ.ಮೀ ಎತ್ತರವಿದೆ. ಜೊತೆಗೆ 2,750 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ, ರೂಬಿ ವೆಲ್ವೆಟ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

New Mahindra XUV 7XO Suv Top Things You Should Must Know

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಲು ಸಾಧ್ಯವಾಗಲಿದೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 240 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿರಬಹುದು ಎಂದು ವರದಿಯಾಗಿದೆ.

ಕಾರ್ಯಕ್ಷಮತೆ (Permanence):

ಹೊಸ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 60 ಲೀಟರ್‌ನಷ್ಟು ಫ್ಯುಯೆಲ್ ಹೊಂದಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

New Mahindra XUV 7XO Suv Top Things You Should Must Know

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅದ್ಬುತವಾಗಿದೆ. ಅದಕ್ಕೆ ತಕ್ಕಂತೆ ಟ್ರಿಪಲ್ ಸ್ಕ್ರೀನ್ ಸೆಟಪ್ (ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ & ಕೋ-ಡ್ರೈವರ್ ಎಂಟರ್‌ಟೈನ್‌ಮೆಂಟ್ ಸಿಸ್ಟಮ್‌), 16 ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ರೇರ್ ಸೀಟ್‌ಗಳು ಹಾಗೂ 540 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, January 6, 2026, 11:09 [IST]
English summary
New mahindra xuv 7xo suv top things you should must know
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+