Tata: ಇದೇ 13ಕ್ಕೆ ಹೊಸ ಟಾಟಾ ಕಾರು ಬಿಡುಗಡೆ.. 27 Km ಮೈಲೇಜ್! ಬರೀ 6 ಲಕ್ಷ ರೂಪಾಯಿ?
ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ನೂತನ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದೊಂದು ಮೈಕ್ರೋ ಎಸ್‌ಯುವಿಯಾಗಿದ್ದು, ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿರಲಿದೆ. ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿರಲಿದೆ. ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಇದೇ ಜನವರಿ 13ರಂದು ಹೊಚ್ಚ ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ಎಸ್‌ಯುವಿಯನ್ನು ಅದ್ದೂರಿಯಾಗಿ ಪರಿಚಯಿಸಲಾಗುತ್ತದೆ. ಈ ಕುರಿತಂತೆ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿಯೂ ಕಂಪನಿಯು ಟೀಸರ್‌ನ್ನು ಬಿಡುಗಡೆಗೊಳಿಸಿದೆ. ಇದು ಕನಿಷ್ಠ ರೂ.6 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಅದು ಟೀಸರ್ ವಿಡಿಯೋದಲ್ಲೂ ಬಹಿರಂಗಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಾಗುವ ಸಾಧ್ಯತೆಯಿದೆ.
ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' ಹೆಚ್ಚು ವಿಶಾಲವಾಗಿರಲಿದೆ. ಸ್ಟ್ಯಾಂಡರ್ಡ್ 'ಪಂಚ್'ನಂತೆ 3,827 ಮಿ.ಮೀ ಉದ್ದ, 1,742 ಮಿ.ಮೀ ಅಗಲ ಹಾಗೂ 1,615 ಮಿ.ಮೀ ಎತ್ತರವಿರಲಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 366 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ.
ಹೊಸ 'ಪಂಚ್ ಫೇಸ್‌ಲಿಫ್ಟ್' ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಗಳಿರುವುದಿಲ್ಲ ಎನ್ನಲಾಗಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿರಲಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ. 18 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು. ಎಂದು ಹೇಳಲಾಗಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದೆ. ವಿನೂತನವಾಗಿರುವ ಡ್ಯಾಶ್‌ಬೋರ್ಡ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ. ದೊಡ್ಡ ಗಾತ್ರದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 2-ಸ್ಪೋಕ್ ಇಲ್ಯುಮಿನೇಟೆಡ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಸನ್‌ರೂಫ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ರೀಮಿಯಂ ಸೌಂಡ್ ಸಿಸ್ಟಮ್ ಹಾಗೂ ಹೆಡ್-ಅಪ್ ಡಿಸ್‌ಪ್ಲೇಯನ್ನು ಹೊಂದಿರಬಹುದು ಎನ್ನಲಾಗಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೂ ಗರಿಷ್ಠವಾದ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಈಚೆಗೆ ಬಿಡುಗಡೆಯಾದ ಟಾಟಾ ಸಿಯೆರಾ (Tata Sierra) ವಿಶೇಷತೆಗಳೇನು:
ಈ ಎಸ್‌ಯುವಿಯು ರೂ.11.49 ಲಕ್ಷದಿಂದ ರೂ.21.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಸಿಯೆರಾ' ಕಾರು 1.5-ಲೀಟರ್ ಪೆಟ್ರೋಲ್ & ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ ಹಾಗೂ ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








