TATA: ಹೊಸ ಟಾಟಾ ಎಸ್‌ಯುವಿ ಅಬ್ಬರಕ್ಕೆ ನಡುಗಿದ ಎದುರಾಳಿಗಳು.. ಫುಲ್ ಡಿಮ್ಯಾಂಡ್!

ಕಳೆದ ವರ್ಷದ ನವೆಂಬರ್‌ನಲ್ಲಿ ನೂತನ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಈ ಕಾರು ಬುಕ್ಕಿಂಗ್‌ನಲ್ಲೂ ಅಬ್ಬರಿಸಿತ್ತು. ಡಿಸೆಂಬರ್ 16ರಂದು ಆರ್ಡರ್ ತೆಗೆದುಕೊಳ್ಳುವ ಕಾರ್ಯಕ್ಕೂ ಕಂಪನಿಯು ಚಾಲನೆ ನೀಡಿತ್ತು. ಕೇವಲ 24 ಗಂಟೆಗಳಲ್ಲಿ 70,000ಕ್ಕೂ ಅಧಿಕ ಸಂಖ್ಯೆಯ ಗ್ರಾಹಕರು ಬುಕ್ ಮಾಡಿದ್ದರು.

ಸದ್ಯ, ಹೊಸ 'ಟಾಟಾ ಸಿಯೆರಾ'ದ ಕಾಯುವಿಕೆ ಅವಧಿ (Waiting Period) ಕುರಿತ ವಿವರಗಳನ್ನು ಬಹಿರಂಗಪಡಿಸಲಾಗಿದೆ. ಈ ಕಾರಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಬಹುತೇಕ ರೂಪಾಂತರಗಳು, ವಿತರಣೆಯಾಗಲು 3 ರಿಂದ 4 ತಿಂಗಳವರೆಗೆ ಸಮಯಾವಕಾಶ ಬೇಕಾಗುತ್ತದೆ. ನೂತನ 'ಸಿಯೆರಾ' ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

New Tata Sierra Suv Waiting Period Revealed Details

ಇದು ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 4,340 ಎಂಎಂ ಉದ್ದ, 1,841 ಎಂಎಂ ಅಗಲ ಹಾಗೂ 1,715 ಎಂಎಂ ಎತ್ತರವಿದೆ. ಜೊತೆಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,750 ಕೆಜಿ ತೂಕವಿದೆ. ಮಿಂಟಲ್ ಗ್ರೇ, ಪ್ರಿಸ್ಟೀನ್ ವೈಟ್, ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್) ಮತ್ತು ಮುನ್ನಾರ್ ಮಿಸ್ಟ್ (ಗ್ರೀನ್) ಎಂಬ ಹೆಸರಿನ ಬಣ್ಣಗಳೊಂದಿಗೂ ದೊರೆಯುತ್ತದೆ.

New Tata Sierra Suv Waiting Period Revealed Details

ನೂತನ 'ಸಿಯೆರಾ' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 106 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 145 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 255 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇನ್ನೊಂದು 1.5-ಲೀ. ಡೀಸೆಲ್ ಎಂಜಿನ್, 118 ಪಿಎಸ್ ಅಶ್ವ ಶಕ್ತಿ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 16.8 ರಿಂದ 20.5 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಹೊಸ 'ಟಾಟಾ ಸಿಯೆರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ರೇರ್ ಎಸಿ ವೆಂಟ್‌ಗಳು ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಹ್ಯುಂಡೈ ಕ್ರೆಟಾ (Hyundai Creta), ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris), ಕಿಯಾ ಸೆಲ್ಟೋಸ್ (Kia Seltos), ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, February 5, 2026, 16:07 [IST]
English summary
New tata sierra suv waiting period revealed details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+