Renault Duster: ಹೊಸ ರೆನಾಲ್ಟ್ ಡಸ್ಟರ್ ಪರಿಚಯ.. ಪ್ರತಿಸ್ಪರ್ಧಿಗಳಿಗೆ ನಡುಕ.. ಕಾರು ಮಾರುಕಟ್ಟೆ ಶೇಕ್!

ರೆನಾಲ್ಟ್ ಡಸ್ಟರ್ (Renault Duster) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ದೇಶೀಯ ರಸ್ತೆಯಲ್ಲಿ ಅಬ್ಬರಿಸಿತ್ತು. 2012ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಅಲ್ಲಿಂದ ಭರ್ತಿ 10 ವರ್ಷಗಳವರೆಗೆ ತನ್ನ ಪ್ರಾಬಲ್ಯ ಸಾಧಿಸಿತ್ತು. ಆದರೆ, 2022ರಲ್ಲಿ ನಾನಾ ಕಾರಣಗಳಿಗೆ ಮಾರಾಟದಿಂದ ದೂರವಾಗಿತ್ತು. ಇಂದು ಚೆನ್ನೈನಲ್ಲಿ ಜರುಗಿದ ಅದ್ದೂರಿ ಸಮಾರಂಭದಲ್ಲಿ 2026ರ ಹೊಸ ತಲೆಮಾರಿನ 'ರೆನಾಲ್ಟ್ ಡಸ್ಟರ್'ನ್ನು ಪರಿಚಯಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ 'ರೆನಾಲ್ಟ್ ಡಸ್ಟರ್' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ನೀರಿಕ್ಷೆಯಿದೆ. ರೂ.9.50 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿರಬಹುದು ಎನ್ನಲಾಗಿದೆ. ಮಾರ್ಚ್‌ನಲ್ಲಿ ಈ ಕಾರಿನ ಬೆಲೆಯನ್ನು ಘೋಷಣೆ ಮಾಡಲಾಗುವುದು. ಸದ್ಯ, ಪ್ರಿ-ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು, ಸಮೀಪದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.21,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು.

Next-Generation Renault Duster Suv Unveiled In India Details

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ನವೀನವಾದ ಬಂಪರ್‌ಗಳು, ಬಾಕ್ಸಿ ಸ್ಕ್ವೇರ್ಡ್-ಆಫ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗ‌ಳು, ಗ್ರಿಲ್‌ನಲ್ಲಿ 'ಡಸ್ಟರ್' ಲೋಗೋ, ಫ್ರಂಟ್ - ರೇರ್ ಸ್ಕಿಡ್ ಪ್ಲೇಟ್‌ಗಳು ಹಾಗೂ 'ಸಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ದೊಡ್ಡ ಗಾತ್ರದ 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 225-ಸೆಕ್ಷನ್ ಟೈರ್‌ಗಳನ್ನು ಪಡೆದಿದೆ.

ಈ ಕಾರು ಸಾಕಷ್ಟು ವಿಶಾಲವಾಗಿದೆ. 212 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಒಳಗೊಂಡಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ ಮತ್ತು ಸನ್‌ಸೆಟ್ ರೆಡ್ ಎಂಬ 6 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Next-Generation Renault Duster Suv Unveiled In India Details

ಹೊಸ 'ರೆನಾಲ್ಟ್ ಡಸ್ಟರ್' ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.8-ಲೀಟರ್ 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಡಿಹೆಚ್‌ಟಿ (ಡೆಡಿಕೇಟೆಡ್ ಹೈಬ್ರಿಡ್ ಟ್ರಾನ್ಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1.3-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Next-Generation Renault Duster Suv Unveiled In India Details

ಇನ್ನೊಂದು 1.0-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 700 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ 'ರೆನಾಲ್ಟ್ ಡಸ್ಟರ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ.10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಅಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360-ಡಿಗ್ರಿ ಕ್ಯಾಮೆರಾ, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಹ್ಯುಂಡೈ ಕ್ರೆಟಾ, ಟಾಟಾ ಸಿಯೆರಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ವಿಕ್ಟೋರಿಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಪೋಕ್ಸ್‌ವ್ಯಾಗನ್ ಟೈಗನ್, ಹೋಂಡಾ ಎಲಿವೇಟ್, ಎಂಜಿ ಆಸ್ಟರ್ ಹಾಗೂ ಸ್ಕೋಡಾ ಕುಶಾಕ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Monday, January 26, 2026, 21:44 [IST]
English summary
Next generation renault duster suv unveiled in india details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+