Nissan: ಸಾಮಾನ್ಯ ಜನರಿಗಾಗಿ ಅಗ್ಗದ ಬೆಲೆಗೆ ಹೊಸ ಎಂಪಿವಿ.. 7-ಸೀಟರ್.. ಫೆಬ್ರವರಿ 17ಕ್ಕೆ ಬಿಡುಗಡೆ

ನಿಸ್ಸಾನ್ ಇಂಡಿಯಾ (Nissan India), ಸಾಮಾನ್ಯ ಜನರಿಗೆ ಬಂಪರ್ ಗುಡ್‌ನ್ಯೂಸ್ ನೀಡಿದೆ. ಹೊಚ್ಚ ಹೊಸ 'ಗ್ರಾವೈಟ್' ಎಂಪಿವಿಯ ಬಿಡುಗಡೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ಫೆಬ್ರವರಿ 17ರಂದು ಅದ್ದೂರಿಯಾಗಿ ಮಾರಾಟಕ್ಕೂ ಬರಲಿದೆ. ಈ ಮೊದಲು ಇದೇ ಕಾರನ್ನು ಜನವರಿ 21ಕ್ಕೆ ಪರಿಚಯಿಸಲು ಕಂಪನಿ ನಿರ್ಧರಿಸಿತ್ತು. ಆದರೆ, ನಾನಾ ಕಾರಣಗಳಿಗೆ ಮುಂದೂಡಲಾಗಿತ್ತು. ಬನ್ನಿ, ನೂತನ ಎಂಪಿವಿಯ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಸ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿ, ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ. ರೂ.6 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

Nissan Gravite Mpv Launch on February 17 Expected Price Details

ವಿನ್ಯಾಸ (Design):

ನಿಸ್ಸಾನ್ & ರೆನಾಲ್ಟ್ ಕಂಪನಿಗಳು ವ್ಯಾವಹಾರಿಕ ಪಾಲುದಾರಿಕೆ ಹೊಂದಿವೆ. ಇದರಿಂದಾಗಿ 'ಗ್ರಾವೈಟ್' ಎಂಪಿವಿಯು 'ರೆನಾಲ್ಟ್ ಟ್ರೈಬರ್'ನ್ನು ಆಧರಿಸಿರಲಿದೆ ಎಂಬುದು ದೃಢಪಟ್ಟಿದೆ. ವಿಶೇಷವಾಗಿ 'ಗ್ರಾವೈಟ್' ಸಿಎಂಎಫ್-ಎ ಪ್ಲಾಟ್‌ಫಾರ್ಮ್‌ನಲ್ಲಿ ತಯಾರಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿರಲಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿರಲಿದೆ.

ಸುತ್ತಳತೆ (Dimension):

ಈ ಕಾರು ಹೆಚ್ಚು ವಿಶಾಲವಾಗಿರಲಿದೆ. 3,985 ಮಿ.ಮೀ ಉದ್ದ, 1,739 ಮಿ.ಮೀ ಅಗಲ ಹಾಗೂ 1,643 ಮಿ.ಮೀ ಎತ್ತರವಿರಲಿದೆ. 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,636 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುವ ನಿರೀಕ್ಷೆಯಿದೆ.

ಆಸನ ಆಯ್ಕೆ ಬೂಟ್ ಸ್ಪೇಸ್‌ (Seating Capacity & Boot Space):

ನೂತನ 'ಗ್ರಾವೈಟ್' ಎಂಪಿವಿಯು 7 ಆಸನಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಕೊಂಚ ಮಟ್ಟಿಗೆ ಸಣ್ಣದಾಗಿರುವ 84 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ.

ಕಾರ್ಯಕ್ಷಮತೆ (Performance):

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿರಲಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಲಿದೆ. 72 ಪಿಎಸ್ ಅಶ್ವ ಶಕ್ತಿ ಹಾಗೂ 96 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಸರಿ ಸುಮಾರು 20 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ನೀಡಬಹುದು.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಮ್ಯಾನುವಲ್ ಎಸಿ, ಕೀಲೆಸ್ ಎಂಟ್ರಿ, 6-ಸ್ಪೀಕರ್ ಸೌಂಡ್ ಸಿಸ್ಟಮ್‌ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ 'ನಿಸ್ಸಾನ್ ಗ್ರಾವೈಟ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಸ್ಪೀಡ್ ಅಲರ್ಟ್ ಸಿಸ್ಟಮ್, ಹಿಲ್-ಸ್ಟಾರ್ಟ್ ಅಸಿಸ್ಟ್ ಮತ್ತು ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Image Source Link: Twitter/ MECHHELP

More from DriveSpark

Article Published On: Wednesday, February 4, 2026, 18:08 [IST]
English summary
Nissan gravite mpv launch on february 17 expected price details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+