ಕೇವಲ ರೂ.5.65 ಲಕ್ಷಕ್ಕೆ 7-ಸೀಟರ್ ಕಾರು.. 20 Km ಮೈಲೇಜ್.. ಮಾಸಿಕ EMI ಎಷ್ಟು?
ಇತ್ತೀಚೆಗೆ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಕಾರು ರೂ.5.65 ಲಕ್ಷದಿಂದ ರೂ.8.93 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈಗಾಗಲೇ ಬುಕ್ಕಿಂಗ್‌ನ್ನು ಪ್ರಾರಂಭಿಸಲಾಗಿದೆ. ಆಸಕ್ತರು, ಹತ್ತಿರದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗಲಿದೆ. ನಾವಿಲ್ಲಿ ಇದೇ 'ಗ್ರಾವೈಟ್'ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಹೊಚ್ಚ ಹೊಸ 'ನಿಸ್ಸಾನ್ ಗ್ರಾವೈಟ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ವಿಸಿಯಾ (Visia) ರೂಪಾಂತರ, ರೂ.6.72 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.5.72 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 9% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ಅಸೆಂಟಾ (Acenta) ರೂಪಾಂತರ, ರೂ.7.82 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.6.82 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 9% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.14,000 ವರೆಗೆ ಇಎಂಐ ಪಾವತಿ ಮಾಡಬೇಕು.
ಇನ್ನೊಂದು ಎನ್-ಕನೆಕ್ಟಾ (N-Connecta) ರೂಪಾಂತರ, ರೂ.8.54 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.7.54 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 9% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.15,550 ವರೆಗೆ ಇಎಂಐ ಕಟ್ಟಬೇಕು.
ಈ ಕಾರಿನ ಟೆಕ್ನಾ (Tekna) ರೂಪಾಂತರ, ರೂ.9.37 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.8,37 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 9% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.17,000 ವರೆಗೆ ಇಎಂಐ ಪಾವತಿಸಬೇಕು.
ಇದೇ 'ಗ್ರಾವೈಟ್'ನ ಎನ್-ಕನೆಕ್ಟಾ ಇಜಡ್ ಶಿಫ್ಟ್ (N-Connecta EZ Shift) ರೂಪಾಂತರ, ರೂ.9.24 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.8.24 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 9% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,000 ವರೆಗೆ ಇಎಂಐ ಕಟ್ಟಬೇಕು.
'ನಿಸ್ಸಾನ್ ಗ್ರಾವೈಟ್' ವಿಶೇಷತೆಗಳೇನು:
ಈ ಎಂಪಿವಿಯು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ದೊಡ್ಡದಾದ 15-ಇಂಚಿನ ವೀಲ್‌ಗಳನ್ನು ಒಳಗೊಂಡಿದೆ. ಫಾರೆಸ್ಟ್ ಗ್ರೀನ್, ಓನಿಕ್ಸ್ ಬ್ಯ್ಲಾಕ್, ಮೆಟಾಲಿಕ್ ಗ್ರೇ ಹಾಗೂ ಸ್ಟಾರ್ಮ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 7 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.3 ರಿಂದ 19.6 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಮ್ಯಾನುವಲ್ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & ಕ್ರೂಸ್ ಕಂಟ್ರೋಲ್ ಮತ್ತು ಹಿಲ್ ಅಸಿಸ್ಟ್‌ನ್ನು ಪಡೆದಿದೆ.
ನಿಮ್ಮ ಗಮನಕ್ಕೆ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಐಎಂ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಾಗಿರಲಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








