Nissan: ಸದ್ದಿಲ್ಲದೇ ಡೀಲರ್‌ಶಿಪ್‌ಗೆ ಬಂದೇ ಬಿಡ್ತು ಹೊಸ ಎಂವಿಪಿ.. 5.65 ಲಕ್ಷ.. 7-ಸೀಟರ್, 20 Km ಮೈಲೇಜ್!
ಈಚೆಗೆ ನೂತನ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಬುಕ್ಕಿಂಗ್‌ನ್ನು ಶುರು ಮಾಡಲಾಗಿದೆ. ಆಸಕ್ತರು ರೂ.11,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದು. ಸದ್ಯ ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಇದೇ 'ಗ್ರಾವೈಟ್'ನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಅತಿ ಶೀಘ್ರದಲ್ಲೇ ವಿತರಣೆಗಳು ಪ್ರಾರಂಭವಾಗಲಿದೆ.
'ನಿಸ್ಸಾನ್ ಗ್ರಾವೈಟ್' ವಿಶೇಷತೆಗಳೇನು:
ನೂತನ 'ನಿಸ್ಸಾನ್ ಗ್ರಾವೈಟ್' ಎಂಪಿವಿಯು ಅಗ್ಗದ ದರದಲ್ಲೂ ಲಭ್ಯವಿದೆ. ರೂ.5.65 ಲಕ್ಷದಿಂದ ರೂ.8.93 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ವಿಸಿಯಾ, ಅಸೆಂಟಾ, ಎನ್-ಕನೆಕ್ಟಾ ಹಾಗೂ ಟೆಕ್ನಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ವೀಲ್‌ಗಳನ್ನು ಹೊಂದಿದೆ. ಫಾರೆಸ್ಟ್ ಗ್ರೀನ್, ಓನಿಕ್ಸ್ ಬ್ಯ್ಲಾಕ್, ಮೆಟಾಲಿಕ್ ಗ್ರೇ, ಬ್ಲೇಡ್ ಸಿಲ್ವರ್ ಹಾಗೂ ಸ್ಟಾರ್ಮ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಎಂಪಿವಿಯು ಹೆಚ್ಚು ವಿಶಾಲವಾಗಿದೆ. 3,987 ಮಿ.ಮೀ ಉದ್ದ, 1,734 ಮಿ.ಮೀ ಅಗಲ ಹಾಗೂ 1,644 ಮಿ.ಮೀ ಎತ್ತರವಿದೆ. ಜೊತೆಗೆ 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 993 ಕೆಜಿ ತೂಕವಿದೆ.
ಹೊಸ 'ನಿಸ್ಸಾನ್ ಗ್ರಾವೈಟ್' ಕಾರು 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 84 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.0-ಲೀಟರ್, 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 6,250 ಆರ್‌ಪಿಎಂನಲ್ಲಿ 71 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,600 ಆರ್‌ಪಿಎಂನಲ್ಲಿ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.3 ರಿಂದ 19.6 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಎಂಪಿವಿಯ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಫುಲ್ ಡಿಜಿಟಲ್ ಇಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್ ಹಾಗೂ ಮ್ಯಾನುವಲ್ ಎಸಿ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ.
ನೂತನ 'ನಿಸ್ಸಾನ್ ಗ್ರಾವೈಟ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಇದಕ್ಕೆ ಹಲವು ಪ್ರತಿಸ್ಪರ್ಧಿಗಳಿವೆ. ಬಹುಮುಖ್ಯವಾಗಿ ರೆನಾಲ್ಟ್ ಟ್ರೈಬರ್ (Renault Triber), ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga), ಮಹೀಂದ್ರಾ ಬೊಲೆರೊ (Mahindra Bolero), ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo) ಹಾಗೂ ಟೊಯೊಟಾ ರೂಮಿಯನ್ (Toyota Rumion) ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.
Image Source: Youtube Shorts @aakashvlog00


Click it and Unblock the Notifications








