Renault: ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ ಬಿಡುಗಡೆ.. ಬರೀ 10.49 ಲಕ್ಷ ರೂ.. ನಿರೀಕ್ಷೆಗೂ ಮೀರಿದ ಫೀಚರ್ಸ್!
ನವದೆಹಲಿಯಲ್ಲಿಂದು ನಡೆದ ಅದ್ದೂರಿ ಸಮಾರಂಭದಲ್ಲಿ 2026ರ ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿ ಬಿಡುಗಡೆಗೊಂಡಿದೆ. ಚೆನ್ನೈನಲ್ಲಿ ಇದೇ ಜನವರಿ 26 ರಂದು ಈ ಕಾರನ್ನು ಅನಾವರಣಗೊಳಿಸಲಾಗಿತ್ತು. ಈಗಾಗಲೇ, ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಆಸಕ್ತ ಗ್ರಾಹಕರು, ಸಮೀಪದ ಡೀಲರ್‌ಶಿಪ್ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.21,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಏಪ್ರಿಲ್‌ನಿಂದ ಆಯ್ದ ರೂಪಾಂತರಗಳ ವಿತರಣೆಯನ್ನು ಪ್ರಾರಂಭಿಸಲಾಗುತ್ತದೆ. ಬನ್ನಿ, ನೂತನ ಎಸ್‌ಯುವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ 'ರೆನಾಲ್ಟ್ ಡಸ್ಟರ್' ಸ್ಪರ್ಧಾತ್ಮಕ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.10.49 ಲಕ್ಷ ಹಾಗೂ ಗರಿಷ್ಠ ರೂ.18.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದ್ದು, ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ಅಥೆಂಟಿಕ್, ಎವಲ್ಯೂಷನ್, ಟೆಕ್ನೋ, ಟೆಕ್ನೋ ಪ್ಲಸ್ ಹಾಗೂ ಐಕಾನಿಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಗ್ರಿಲ್‌ನಲ್ಲಿ ದಪ್ಪ ಅಕ್ಷರಗಳಿಂದ 'ಡಸ್ಟರ್' ಎಂದು ಬರೆಯಲಾಗಿದೆ. ಅತ್ಯಾಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಸಿ' ಆಕಾರದಲ್ಲಿರುವ ಎಲ್ಇಡಿ ಟೈಲ್‌ಲೈಟ್‌ಗಳು, ಸಿಲ್ವರ್-ಫಿನಿಶ್ ಸ್ಕಿಡ್ ಪ್ಲೇಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ ಹಾಗೂ ಸನ್‌ಸೆಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ರೆನಾಲ್ಟ್ ಡಸ್ಟರ್' ಸಾಕಷ್ಟು ವಿಶಾಲವಾಗಿದೆ. 4,346 ಮಿ.ಮೀ ಉದ್ದ, 1,815 ಮಿ.ಮೀ ಅಗಲ ಮತ್ತು 1,703 ಮಿ.ಮೀ ಎತ್ತರವಿದೆ. ಜೊತೆಗೆ 212 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,657 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು 3 ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.8-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 160 ಪಿಎಸ್ ಅಶ್ವ ಶಕ್ತಿ ಹಾಗೂ 172 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 160 ಅಶ್ವ ಶಕ್ತಿ ಮತ್ತು 280 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
ಇನ್ನೊಂದು 1.0-ಲೀಟರ್ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ ಹಾಗೂ 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 8-ಸ್ಪೀಡ್ ಡಿಹೆಚ್‌ಟಿ (ಡೆಡಿಕೇಟೆಡ್ ಹೈಬ್ರಿಡ್ ಟ್ರಾನ್ಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 14 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೇವಲ ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಲಿದೆ.

'ರೆನಾಲ್ಟ್ ಡಸ್ಟರ್'ನ ಕ್ಯಾಬಿನ್ ವಿನ್ಯಾಸವು ಭರ್ಜರಿಯಾಗಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬೃಹದಾಕಾರದ 700 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








