Renault: ಪವರ್ ತೋರಿಸಲು ಬಂದೆ ಬಿಡ್ತು ರೆನಾಲ್ಟ್ ಡಸ್ಟರ್.. ಪ್ರಮುಖಾಂಶಗಳಿವು, ನಿನ್ನೆಯಷ್ಟೇ ಅನಾವರಣ

ನಿನ್ನೆ ಬಹುನಿರೀಕ್ಷಿತ 2026ರ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿ ಅನಾವರಣಗೊಂಡಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿತಾಗಿದೆ. ಈಗಾಗಲೇ ಪ್ರಿ-ಬುಕ್ಕಿಂಗ್‌ನ್ನು ಪ್ರಾರಂಭಿಸಲಾಗಿದ್ದು, ರೂ.21,000 ಮುಂಗಡ ಹಣವನ್ನು ಪಾವತಿಸಿ, ಕಾಯ್ದಿರಿಸಬಹುದು. ನೀವು ನೂತನ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಡಸ್ಟರ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಈ 'ರೆನಾಲ್ಟ್ ಡಸ್ಟರ್' ಕೈಗೆಟುಕುವ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ. ಕನಿಷ್ಠ ರೂ.9.50 ಲಕ್ಷ ಹಾಗೂ ಗರಿಷ್ಠ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು. ಮಾರ್ಚ್‌ನಲ್ಲಿ ಅಧಿಕೃತ ದರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

Renault Duster Suv Top Things You Should Must Know

ವಿನ್ಯಾಸ & ಬಣ್ಣಗಳು (Design & Colours):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗ‌ಳು, 'ಸಿ' ಆಕಾರದಲ್ಲಿರುವ ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ ಹಾಗೂ ಸನ್‌ಸೆಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ 'ರೆನಾಲ್ಟ್ ಡಸ್ಟರ್' 5 ಆಸನಗಳಿದ್ದು, ಇವು ಹೆಚ್ಚು ವಿಶಾಲವಾಗಿವೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸರಿ ಸುಮಾರು 700 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Renault Duster Suv Top Things You Should Must Know

ಕಾರ್ಯಕ್ಷಮತೆ (Performance):

ಈ ಕಾರು 3 ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.8-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 160 ಬಿಹೆಚ್‍ಪಿ ಅಶ್ವ ಶಕ್ತಿ ಮತ್ತು 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.3-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 160 ಬಿಹೆಚ್‍ಪಿ ಅಶ್ವ ಶಕ್ತಿ ಹಾಗೂ 280 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಇನ್ನೊಂದು 1.0-ಲೀ. ಪೆಟ್ರೋಲ್ ಎಂಜಿನ್, 100 ಬಿಹೆಚ್‍ಪಿ ಅಶ್ವ ಶಕ್ತಿ ಮತ್ತು160 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 6-ಆಟೋಮೆಟಿಕ್ ಸೇರಿದಂತೆ ವಿವಿಧ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 13.9 ರಿಂದ 19.87 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

Renault Duster Suv Top Things You Should Must Know

ವೈಶಿಷ್ಟ್ಯಗಳು (Features):

ಹೊಸ 'ರೆನಾಲ್ಟ್ ಡಸ್ಟರ್' ಅದ್ಭುತವಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಅಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars):

ನೂತನ 'ರೆನಾಲ್ಟ್ ಡಸ್ಟರ್'ಗೆ ಹಲವು ಪ್ರತಿಸ್ಪರ್ಧಿಗಳಿವೆ. ಹ್ಯುಂಡೈ ಕ್ರೆಟಾ (Hyundai Creta), ಕಿಯಾ ಸೆಲ್ಟೋಸ್ (Kia Seltos), ಮಾರುತಿ ಸುಜುಕಿ ಗ್ರಾಂಡ್ ವಿಟಾರಾ (Maruti Suzuki Grand Vitara) ಹಾಗೂ ಟಾಟಾ ಸಿಯೆರಾ (Tata Sierra) ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Tuesday, January 27, 2026, 8:30 [IST]
English summary
Renault duster suv top things you should must know
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+