ಹೊಸ ರೆನಾಲ್ಟ್ ಡಸ್ಟರ್‌ಗಾಗಿ ಶೋರೂ ಮುಂದೆ ಕ್ಯೂ ನಿಲ್ಲಲು ಸಿದ್ಧರಾಗಿ.. ಟಾಟಾ ಸಿಯೆರಾಗೆ ಸ್ಪರ್ಧಿಯಿದು: ಯಾವುವು ಬೆಸ್ಟ್?

ಇಂದು ನೂತನ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿ ಮಾರಾಟಕ್ಕೆ ಬಂದಿದೆ. ಇದಕ್ಕೆ ಟಾಟಾ ಸಿಯೆರಾ (Tata Sierra) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇವೆರೆಡು ಕಾರುಗಳು ಒಂದಕ್ಕಿಂತ ಒಂದು ಚೆನ್ನಾಗಿದ್ದು, ಹಲವು ನವೀನತೆಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ.. ಈ ನೂತನ ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಕಾರುಗಳು ತುಸು ದುಬಾರಿ ದರವನ್ನು ಪಡೆದಿವೆ. ರೆನಾಲ್ಟ್ ಡಸ್ಟರ್ ರೂ.10.49 ಲಕ್ಷದಿಂದ ರೂ.18.49 ಲಕ್ಷ ಬೆಲೆಯನ್ನು ಒಳಗೊಂಡಿದೆ. ಅದೇ ರೀತಿಯಲ್ಲಿ ಟಾಟಾ ಸಿಯೆರಾ ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಲೆಯ ವಿಚಾರದಲ್ಲಿ 'ಡಸ್ಟರ್‌ಗೆ ಹೋಲಿಸಿದರೆ, 'ಸಿಯೆರಾ'ವು ಸ್ವಲ್ಪ ಮಟ್ಟಿಗೆ ಅಧಿಕ ದರವನ್ನು ಹೊಂದಿದೆ.

Renault Duster vs Tata Sierra Which Suv Best Comparison

ವಿನ್ಯಾಸ (Design):

ಈ ಎಸ್‌ಯುವಿಗಳು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿವೆ. ರೆನಾಲ್ಟ್ ಡಸ್ಟರ್ ಕಾರು ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ದೊಡ್ಡ ಗಾತ್ರದ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಟಾಟಾ ಸಿಯೆರಾ ಸಹ ಉತ್ತಮವಾಗಿದ್ದು, ಪ್ರತಿಯೊಬ್ಬರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ತನ್ನದಾಗಿಸಿಕೊಂಡಿದೆ. ಬೃಹದಾಕಾರದ 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Renault Duster vs Tata Sierra Which Suv Best Comparison

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇವೆರೆಡು ಎಸ್‌ಯುವಿಗಳು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚು ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ದೊಡ್ಡದಾದ ಡಸ್ಟರ್ 700 ಲೀಟರ್‌ ಹಾಗೂ ಸಿಯೆರಾ ಕೊಂಚ ಸಣ್ಣದಾದ 622 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಈ ಕಾರುಗಳು ಸೇರಿಗೆ ಸವ್ವಾಸೇರು ಎಂಬಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. ರೆನಾಲ್ಟ್ ಡಸ್ಟರ್ 1.8-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.3-ಲೀ. ಟರ್ಬೊ ಪೆಟ್ರೋಲ್ & 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 8-ಸ್ಪೀಡ್ ಡಿಹೆಚ್‌ಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 14 ರಿಂದ 26 ಕಿ.ಮೀ ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ಟಾಟಾ ಸಿಯೆರಾವು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ 7-ಸ್ಪೀಡ್ ಡಿಸಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16.8 ರಿಂದ 20.5 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು.

ವೈಶಿಷ್ಟ್ಯಗಳು (Features):

ಇವೆರೆಡು ಎಸ್‌ಯುವಿಗಳು ಪರಸ್ಪರ ಸ್ಪರ್ಧೆಯೊಡ್ಡುವ ರೀತಿಯಲ್ಲಿ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿವೆ. ಡಸ್ಟರ್ ಕಾರು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಪನೋರಮಿಕ್ ಸನ್‌ರೂಫ್‌ಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಸಿಯೆರಾ ಎಸ್‌ಯುವಿಯು ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ರೇರ್-ಎಸಿ ವೆಂಟ್‌ಗಳು, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Tuesday, March 17, 2026, 15:36 [IST]
English summary
Renault duster vs tata sierra which suv best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+