Renault: ಈ ಜನಪ್ರಿಯ ಕಾರಿಗೆ ಭರ್ಜರಿ ಆಫರ್.. 5.76 ಲಕ್ಷ ರೂಪಾಯಿ.. 20 Km ಮೈಲೇಜ್!
ರೆನಾಲ್ಟ್ ಕೈಗರ್ (Renault Kiger) ಜನಮೆಚ್ಚಿದ ಎಸ್‌ಯುವಿಯಾಗಿದೆ. ಈ ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಎಸ್‌ಯುವಿಯೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಕೈಗರ್' ಚಾಯ್ಸ್ ಆಗಲಿದೆ. ಈ 2026ರ ಫೆಬ್ರವರಿಯಲ್ಲಿ ಉತ್ತಮವಾದ ಆಫರ್‌ನ್ನು ಪಡೆದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
2026ರಲ್ಲಿ ತಯಾರಿಸಿದ 'ರೆನಾಲ್ಟ್ ಕೈಗರ್'ನ ಮಾಡೆಲ್‌ಗಳು, ರೂ.25,000 ವರೆಗೆ ಹಣಕಾಸಿನ ಪ್ರಯೋಜನವನ್ನು ಪಡೆದಿವೆ. ಅದೇ ರೀತಿಯಲ್ಲಿ 2025ರಲ್ಲಿ ಉತ್ಪಾದಿಸಿದ ಮಾಡೆಲ್‌ಗಳು ರೂ.63,500 ವರೆಗೆ ರಿಯಾಯಿತಿಯನ್ನು ಹೊಂದಿವೆ. ನೂತನ 'ಕೈಗರ್' ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

'ರೆನಾಲ್ಟ್ ಕೈಗರ್' ವಿಶೇಷತೆಗಳೇನು:
ಈ ಎಸ್‌ಯುವಿಯು ಅಥೆಂಟಿಕ್, ಎವೊಲ್ಯೂಷನ್, ಟೆಕ್ನೋ, ಎಮೊಷನ್, ಎಮೊಷನ್ ಟರ್ಬೊ, ಟೆಕ್ನೋ ಟರ್ಬೊ ಸಿವಿಟಿ ಮತ್ತು ಎಮೊಷನ್ ಸಿವಿಟಿ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,991 ಎಂಎಂ ಉದ್ದ, 1,750 ಎಂಎಂ ಅಗಲ ಹಾಗೂ 1,605 ಎಂಎಂ ಎತ್ತರವಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಕೈಗರ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.0 ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಪಿಎಸ್ ಅಶ್ವ ಶಕ್ತಿ ಹಾಗೂ 96 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.0-ಲೀ. ಟರ್ಬೋ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ ಮತ್ತು 160 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.83 ರಿಂದ 20.38 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 10.20 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ 'ರೆನಾಲ್ಟ್ ಕೈಗರ್' ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








