20.38 Km ಮೈಲೇಜ್.. ಕೇವಲ 5.76 ಲಕ್ಷ ರೂ.ಗೆ ಸಿಗುತ್ತೆ.. ಈ ಜನಪ್ರಿಯ ಎಸ್‌ಯುವಿಗೆ ಮುಗಿಬಿದ್ದ ಜನ!

ರೆನಾಲ್ಟ್ ಕೈಗರ್ (Renault Kiger) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಮುಗಿಬಿದ್ದ ಕೊಂಡುಕೊಳ್ಳುತ್ತಿದ್ದಾರೆ. ಈ 2026 ಫೆಬ್ರವರಿಯಲ್ಲಿಯೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 701 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 433 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 61.89% ಬೆಳವಣಿಗೆಯಾಗಿದೆ.

ರೆನಾಲ್ಟ್ ಕೈಗರ್ ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಅಥೆಂಟಿಕ್ (Authentic), ಎವೊಲ್ಯೂಷನ್ (Evolution), ಟೆಕ್ನೋ (Techno) ಮತ್ತು ಎಮೊಷನ್ (Emotion) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Renault Kiger Suv February 2026 Sales Report

ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಓಯಸಿಸ್ ಯೆಲ್ಲೋ, ಷಾಡೋ ಗ್ರೇ, ಕ್ಯಾಸ್ಪಿಯನ್ ಬ್ಲೂ, ಸ್ಟೆಲ್ತ್ ಬ್ಲ್ಯಾಕ್, ಮೂನ್‌ಲೈಟ್ ಸಿಲ್ವರ್, ಐಸ್ ಕೂಲ್ ವೈಟ್ ಮತ್ತು ರೇಡಿಯಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಕೈಗರ್' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,991 ಎಂಎಂ ಉದ್ದ, 1,750 ಎಂಎಂ ಅಗಲ ಹಾಗೂ 1,605 ಎಂಎಂ ಎತ್ತರವಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,500 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 940 ಕೆಜಿ ತೂಕವಿದೆ.

Renault Kiger Suv February 2026 Sales Report

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.0 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 6,250 ಆರ್‌ಪಿಎಂನಲ್ಲಿ 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,500 ಆರ್‌ಪಿಎಂನಲ್ಲಿ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 5,000 ಆರ್‌ಪಿಎಂನಲ್ಲಿ 100 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,600 ಆರ್‌ಪಿಎಂನಲ್ಲಿ 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 20.38 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

Renault Kiger Suv February 2026 Sales Report

ಈ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 10.20 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ರೇರ್ ಎಸಿ ವೆಂಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Monday, March 16, 2026, 17:56 [IST]
English summary
Renault kiger suv february 2026 sales report
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+