ಇದು ಟಾಟಾ & ಮಾರುತಿ ಕಾರಲ್ಲ.. ರೂ.5 ಲಕ್ಷಕ್ಕಿಂತ ಕಮ್ಮಿ.. ಅತಿ ಶೀಘ್ರದಲ್ಲೇ ಈ ಹೊಸ ಕಾರು ಬಿಡುಗಡೆ!
ರೆನಾಲ್ಟ್ ಇಂಡಿಯಾ (Renault India) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. 2025ರಲ್ಲಿ ಟ್ರೈಬರ್ ಎಂಪಿವಿ ಹಾಗೂ ಕೈಗರ್ ಎಸ್‌ಯುವಿಯನ್ನು ನವೀಕರಿಸಿ ಬಿಡುಗಡೆಗೊಳಿಸಿತ್ತು. ಸದ್ಯ, ಎಂಟ್ರಿ-ಲೆವೆಲ್ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿರುವ 'ಕ್ವಿಡ್'ನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈಚೆಗೆ ಇದೇ ಕಾರಿನ 'ಫೇಸ್‌ಲಿಫ್ಟ್' ಮಾಡೆಲ್ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗಲೂ ಕಾಣಿಸಿಕೊಂಡಿದೆ. ಅದರ 'ಸ್ಪೈ' ಫೋಟೋಗಳು ಆನ್‌ಲೈನ್‌ನಲ್ಲಿಯೂ ಸೋರಿಕೆಯಾಗಿವೆ.
ಪರೀಕ್ಷಾರ್ಥ ಓಡಾಟದ ವೇಳೆಯಲ್ಲಿ ಕಂಡುಬಂದ ಕಾರಿನ ಫೇಸ್, ಲೋಗೋಗಳು ಹಾಗೂ ಟೈಲ್ ಲ್ಯಾಂಪ್‌ಗಳನ್ನು ಮುಚ್ಚಲಾಗಿತ್ತು. ಹೀಗಾಗಿ, ವಿನ್ಯಾಸದ ಕುರಿತಂತೆ ಬಹುತೇಕ ಅಂಶಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಇದು ಸ್ಟೈಲಿಶ್ ಲುಕ್‌ನ್ನು ಹೊಂದಿರಲಿದೆ. ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿರುವ ನಿರೀಕ್ಷೆಯಿದೆ.

ನೂತನ 'ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್' ಕೂಡ ಹೆಚ್ಚು ವಿಶಾಲವಾಗಿರಲಿದೆ. ಈಗಿರುವ ಕಾರಿನಂತೆಯೇ 3,731 ಮಿ.ಮೀ ಉದ್ದ, 1,579 ಮಿ.ಮೀ ಅಗಲ ಹಾಗೂ 1,490 ಮಿ.ಮೀ ಎತ್ತರವಿರಲಿದೆ. 184 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,422 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.
ಈ ನವೀಕರಣಗೊಂಡ 'ಕ್ವಿಡ್'ನಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯೇ ಇರಲಿದ್ದು, ಪ್ರಯಾಣಿಕರು ಆರಾಮಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 279 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರದೆ ಎಂದು ಹೇಳಲಾಗಿದೆ.

ಇದರ ಪವರ್‌ಟ್ರೇನ್‌ನಲ್ಲೂ ಯಾವುದೇ ಬದಲಾವಣೆಗಳಿರುವಿಲ್ಲ ಎನ್ನಲಾಗಿದೆ. 1-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿರಲಿದೆ. 68 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದ್ದು, 22 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಹೊಸ 'ಕ್ವಿಡ್ ಫೇಸ್‌ಲಿಫ್ಟ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮ್ಯಾನುವಲ್ ಎಸಿ, ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 6-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಹೊಂದಿರುವ ನಿರೀಕ್ಷೆಯಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿರಬಹುದು ಎನ್ನಲಾಗಿದೆ.
ಎಲ್ಲವು ಅಂದುಕೊಂಡಂತೆ ನಡೆದರೆ 'ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್' ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ವರ್ಷವೇ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ರೂ.5 ಲಕ್ಷಕ್ಕಿಂತ ಅಗ್ಗದ ದರದರಲ್ಲೂ ಲಭ್ಯವಾಗುವ ನಿರೀಕ್ಷೆಯಿದೆ. ಪ್ರಸ್ತುತವಿರುವ 'ಕ್ವಿಡ್' ರೂ.4.30 ಲಕ್ಷದಿಂದ ರೂ.5.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿರಲಿವೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ಟಾಟಾ ಟಿಯಾಗೊ (Tata Tiago), ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಹಾಗೂ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
Image Source: Motor1.com


Click it and Unblock the Notifications








