ತೊಡೆ ತಟ್ಟಿದ ಸ್ಕೋಡಾ.. 7.59 ಲಕ್ಷ, 18 Km ಮೈಲೇಜ್.. ಸದ್ದಿಲ್ಲದೇ 50,000 ಕೈಲಾಕ್ ಕಾರುಗಳ ತಯಾರಿಕೆ!
ಸ್ಕೋಡಾ ಕೈಲಾಕ್ (Skoda Kylaq) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. 2024ರ ನವೆಂಬರ್ 6 ರಂದು ಮೊದಲ ಬಾರಿಗೆ 'ಕೈಲಾಕ್' ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. 2025ರ ಜನವರಿ 27 ರಿಂದ ವಿತರಣೆಯನ್ನು ಶುರು ಮಾಡಲಾಗಿತ್ತು. ಸದ್ಯ, ಇದೇ ಕಾರಿನ ಉತ್ಪಾದನೆಯಲ್ಲಿ ಹೊಸ ಇತಿಹಾಸವೊಂದನ್ನು ಬರೆದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಪುಣೆ ಸಮೀಪದ ಚಕನ್ ಉತ್ಪಾದನಾ ಘಟಕದಿಂದ ಸ್ಕೋಡಾ ಕಂಪನಿಯು 50,000ನೇ ಯುನಿಟ್ 'ಕೈಲಾಕ್' ಎಸ್‌ಯುವಿಯನ್ನು ಹೊರತಂದಿದೆ. ಈ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ಮುಟ್ಟಿದೆ. ಇದು ವಿತರಣೆ ಆರಂಭವಾದ ಕೇವಲ 1 ವರ್ಷದಲ್ಲಿಯೇ ಸಾಧ್ಯವಾಗಿದೆ. ಜೊತೆಗೆ 2025ರ ಡಿಸೆಂಬರ್ ಅಂತ್ಯದೊಳಗೆ 46,872 ಯುನಿಟ್ 'ಕೈಲಾಕ್' ಕಾರುಗಳನ್ನು ಮಾರಾಟವು ಮಾಡಲಾಗಿತ್ತು.

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಅವರು, ಸ್ಕೋಡಾ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ್ದರು. 50,000ನೇ 'ಸ್ಕೋಡಾ ಕೈಲಾಕ್' ಉತ್ಪಾದಿಸುವ ಮೈಲಿಗಲ್ಲು ಸಾಧಿಸಿದ್ದಕ್ಕಾಗಿ ಕಂಪನಿಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
'ಸ್ಕೋಡಾ ಕೈಲಾಕ್' ವಿಶೇಷತೆಗಳೇನು:
ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.59 ಹಾಗೂ ಗರಿಷ್ಠ ರೂ.12.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಕ್ಲಾಸಿಕ್, ಸಿಗ್ನೇಚರ್, ಸಿಗ್ನೇಚರ್ ಪ್ಲಸ್ ಮತ್ತು ಪ್ರೆಸ್ಟೀಜ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ನೂತನ 'ಸ್ಕೋಡಾ ಕೈಲಾಕ್' ಎಸ್‌ಯುವಿಯು ಹೆಚ್ಚು ವಿಶಾಲವಾಗಿದೆ. 3,995 ಮಿ.ಮೀ ಉದ್ದ, 1,783 ಮಿ.ಮೀ ಅಗಲ ಮತ್ತು 1,619 ಮಿ.ಮೀ ಎತ್ತರವಿದೆ. 189 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,566 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,660 ಕೆಜಿ ತೂಕವಿದೆ.

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 188 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 446 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್-ಸ್ಟಾಪ್ ಬಟನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಕೈಲಾಕ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








