Tata: 5-ಸ್ಟಾರ್ ಟಾಟಾ ಕಾರಿದು.. ಬರೀ 6 ಲಕ್ಷ ರೂ.. 26 Km ಮೈಲೇಜ್.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!
ಟಾಟಾ ಆಲ್ಟ್ರೋಜ್ (Tata Altroz) ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದ್ದು, ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 2,063 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,604 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 29% ಬೆಳವಣಿಗೆಯಾಗಿದೆ.
ಟಾಟಾ ಆಲ್ಟ್ರೋಜ್ ವಿಶೇಷತೆಗಳೇನು:
ನೂತನ 'ಟಾಟಾ ಆಲ್ಟ್ರೋಜ್' ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.6.30 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್ (Smart), ಪ್ಯೂರ್ (Pure), ಪ್ಯೂರ್ ಎಸ್ (Pure S), ಕ್ರಿಯೇಟಿವ್ (Creative), ಕ್ರಿಯೇಟಿವ್ ಎಸ್ (Creative S), ಅಕಾಂಪ್ಲಿಶ್ಡ್ ಎಸ್ (Accomplished S) ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಸ್ (Accomplished Plus S) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ಯೂರ್ ಗ್ರೇ, ರಾಯಲ್ ಬ್ಲೂ, ಪ್ರಿಸ್ಟೈನ್ ವೈಟ್, ಎಂಬರ್ ಗ್ಲೋ & ಡ್ಯೂನ್ ಗ್ಲೋ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಹ್ಯಾಚ್‌ಬ್ಯಾಕ್ ಸಾಕಷ್ಟು ವಿಶಾಲವಾಗಿದೆ. 3,990 ಎಂಎಂ ಉದ್ದ, 1,755 ಎಂಎಂ ಅಗಲ ಹಾಗೂ 1,523 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,501 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,150 ಕೆಜಿ ತೂಕವಿದೆ.
ಹೊಸ 'ಆಲ್ಟ್ರೋಜ್' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 73.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 103 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.
ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್, 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.33 ರಿಂದ 26.2 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಸೆಟಪ್, ಸನ್‌ರೂಫ್ ಹಾಗೂ ಯುಎಸ್‌ಬಿ ಸಿ ಚಾರ್ಜಿಂಗ್ ಪೋರ್ಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯ ಸಲುವಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿದೆ. 6-ಏರ್‌ಬ್ಯಾಗ್, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








