TATA: ಶಕ್ತಿಶಾಲಿಯಾದ ಟಾಟಾ ಕಾರಿದು.. ಭಾರೀ ಸಂಖ್ಯೆಯಲ್ಲಿ ಸೇಲ್ಸ್.. ರೂ.12.89 ಲಕ್ಷ.. 5-ಸೀಟರ್!

ಟಾಟಾ ಹ್ಯಾರಿಯರ್ (Tata Harrier) ಜನಮೆಚ್ಚಿನ ಎಸ್‌ಯುವಿಯಾಗಿ ಹೊರಹೊಮ್ಮುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿಯಲ್ಲಿಯೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 3,096 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,376 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 125% ಬೆಳವಣಿಗೆಯಾಗಿದೆ.

ಸ್ಟ್ಯಾಂಡರ್ಡ್ 'ಟಾಟಾ ಹ್ಯಾರಿಯರ್' ವಿಶೇಷತೆಗಳೇನು:

ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.12.89 ಲಕ್ಷ ಹಾಗೂ ಗರಿಷ್ಠ ರೂ.25.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್ ಎಕ್ಸ್, ಅಡ್ವೆಂಚರ್ ಎಕ್ಸ್ ಮತ್ತು ಫಿಯರ್‌ಲೆಸ್ ಎಕ್ಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

Tata Harrier Suv February 2026 Sales Report

ಈ ಕಾರು ಸಾಕಷ್ಟು ವಿಶಾಲವಾಗಿದೆ. 4,605 ಮಿ.ಮೀ ಉದ್ದ, 1,922 ಮಿ.ಮೀ ಅಗಲ ಹಾಗೂ 1,718 ಮಿ.ಮೀ ಎತ್ತರವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1,807 ಕೆಜಿ ತೂಕವಿದೆ. ಸನ್‌ಲೈಟ್ ಯೆಲ್ಲೋ, ಸೀವೀಡ್ ಗ್ರೀನ್, ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ ಮತ್ತು ನೈಟ್ರೋ ಕ್ರಿಮ್ಸನ್ ಎಂಬ ಬಣ್ಣದೊಂದಿಗೂ ಸಿಗುತ್ತದೆ.

Tata Harrier Suv February 2026 Sales Report

ನೂತನ 'ಹ್ಯಾರಿಯರ್' 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್, 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 2-ಲೀಟರ್ ಡೀಸೆಲ್ ಎಂಜಿನ್‌, 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇದು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 195 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಆಟೋಮೆಟಿಕ್ ಎಸಿ & ಸನ್‌ರೂಫ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟಾಟಾ ಹ್ಯಾರಿಯರ್ ಇವಿ ಸಹ ಗ್ರಾಹಕರ ಖರೀದಿಗೆ ಲಭ್ಯ:

ಇದು ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ & ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

ಈ ಕಾರು 5 ಆಸನಗಳನ್ನು ಒಳಗೊಂಡಿದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 10-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, March 11, 2026, 15:59 [IST]
English summary
Tata harrier suv february 2026 sales report
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+