ನಾಲ್ಕೂವರೆ ಲಕ್ಷಕ್ಕೆ ಕಾರು.. ಪೆಟ್ರೋಲ್, CNG, EV ರೂಪದಲ್ಲಿ ಸಿಗುತ್ತೆ.. ಚಿಕ್ಕ ಸಂಸಾರಕ್ಕೆ ಫರ್ಫೆಕ್ಟ್.. ಫುಲ್ ಡಿಮ್ಯಾಂಡ್!
ಟಾಟಾ ಟಿಯಾಗೊ (Tata Tiago) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. 2016ರಲ್ಲಿ ಬಿಡುಗಡೆಯಾದ ಈ ಕಾರು, ಅಂದಿನಿಂದ ಇಂದಿನವರೆಗೆ ಉತ್ತಮ ಸಂಖ್ಯೆಯಲ್ಲಿಯೇ ಮಾರಾಟವಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಫೆಬ್ರವರಿ - 2026) ಒಟ್ಟು 7,040 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 6,954 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 1% ಬೆಳವಣಿಗೆಯಾಗಿದೆ.
ಸ್ಟ್ಯಾಂಡರ್ಡ್ 'ಟಾಟಾ ಟಿಯಾಗೊ' ವಿಶೇಷತೆಗಳೇನು:
ಇದು ಅಗ್ಗದ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.4.57 ಲಕ್ಷ ಹಾಗೂ ಗರಿಷ್ಠ ರೂ.7.82 ಲಕ್ಷ (ಎಕ್ಸ್-ಶೋರೂಂ) ದರದನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, 15-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 3,767 ಎಂಎಂ ಉದ್ದ, 1,677 ಎಂಎಂ ಅಗಲ ಹಾಗೂ 1,535 ಎಂಎಂ ಎತ್ತರವಿದೆ. ಜೊತೆಗೆ 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,400 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 935 ಕೆಜಿ ತೂಕವಿದೆ. ಅರಿಜೋನಾ ಬ್ಲೂ, ಟೊರ್ನಾಡೊ ಬ್ಲೂ, ಓಷನ್ ಬ್ಲೂ, ಡೇಟೋನಾ ಗ್ರೇ ಮತ್ತು ಸೂಪರ್ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ 'ಟಿಯಾಗೊ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 86 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,300 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು 1.2-ಲೀ. ಪೆಟ್ರೋಲ್, 6,000 ಆರ್‌ಪಿಎಂನಲ್ಲಿ 74.5 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,500 ಆರ್‌ಪಿಎಂನಲ್ಲಿ 96.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 28.06 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 12.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 242 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ ಟಿಯಾಗೊ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಟಾಟಾ ಟಿಯಾಗೊ ಇವಿ (Tata Tiago EV) ಕೂಡ ಖರೀದಿ ಸಿಗುತ್ತೆ:
ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕೈಗೆಟುಕುವ ದರದಲ್ಲೂ ದೊರೆಯುತ್ತದೆ. ರೂ.7.99 ಲಕ್ಷದಿಂದ ರೂ.11.14 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 24 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 250 ರಿಂದ 315 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.


Click it and Unblock the Notifications








