TATA: ಸ್ವದೇಶಿ ಬ್ರಾಂಡ್‌ಗೆ ಮನಸೋತ ಜನ.. ನೂತನ ಟಾಟಾ ಕಾರುಗಳು ಭಾರೀ ಸಂಖ್ಯೆಯಲ್ಲಿ ಸೇಲ್ಸ್!
ಟಾಟಾ ಮೋಟಾರ್ಸ್ (Tata Motors), ಜನಮೆಚ್ಚಿದ ಸ್ವದೇಶಿ ಬ್ರಾಂಡ್ ಎಂದೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಟಿಗೂರ್, ಆಲ್ಟ್ರೋಜ್, ಪಂಚ್, ನೆಕ್ಸಾನ್, ಹ್ಯಾರಿಯರ್ ಹಾಗೂ ಸಫಾರಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, 2026ರ ಜನವರಿಯ ಒಟ್ಟು ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದ್ದು, ಕಂಪನಿಯು ಉತ್ತಮವಾದ ಪ್ರಗತಿಯನ್ನು ಕಂಡಿದೆ. ಸರಿ ಸುಮಾರು 71,000 ಯುನಿಟ್‌ಗಳನ್ನು ಮಾರಾಟಗೊಳಿಸಿದೆ.
ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರಾಗಿ 'ಟಾಟಾ ನೆಕ್ಸಾನ್' ಹೊರಹೊಮ್ಮಿದೆ. ಬರೋಬ್ಬರಿ 23,000 ಅಧಿಕ ಕಾರುಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಇದರೊಂದಿಗೆ 10 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟಿದೆ. 'ಪಂಚ್' ಸಹ ದೊಡ್ಡ ಪ್ರಮಾಣದಲ್ಲಿ ಮಾರಾಟವಾಗಿದೆ. 19,000 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಈ ಮೂಲಕ ಕೇವಲ 4 ವರ್ಷ 3 ತಿಂಗಳಲ್ಲಿ 7 ಲಕ್ಷ ಯುನಿಟ್ ಮಾರುವುದರೊಂದಿಗೆ ಹೊಸ ಇತಿಹಾಸ ನಿರ್ಮಿಸಲಾಗಿದೆ.

'ಟಾಟಾ ಟಿಯಾಗೊ'ಗೂ ಉತ್ತಮವಾದ ಬೇಡಿಕೆಯಿದೆ. ಈವರೆಗೆ 7 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಹೊಸದಾಗಿ ಬಿಡುಗಡೆಗೊಂಡ ಸಿಯೆರಾ, ಪಂಚ್. ಹ್ಯಾರಿಯರ್ ಹಾಗೂ ಸಫಾರಿ (ಪೆಟ್ರೋಲ್) ಕಾರುಗಳು ಗ್ರಾಹಕರನ್ನು ಆಕರ್ಷಿಸಿವೆ. ಜೊತೆಗೆ ಸಿಯೆರಾ ಉತ್ಪಾದನೆಯನ್ನು ಹಂತಹಂತವಾಗಿ ಹೆಚ್ಚಿಸುವುದಾಗಿ ಕಂಪನಿಯು ಘೋಷಣೆ ಮಾಡಿದೆ.
ಗೇಮ್ ಚೇಂಜರ್ ಟಾಟಾ ನೆಕ್ಸಾನ್ ವಿಶೇಷತೆಗಳೇನು:
ನೂತನ ಸ್ಟ್ಯಾಂಡರ್ಡ್ 'ನೆಕ್ಸಾನ್' ಕಾರು ಕನಿಷ್ಠ ರೂ.7.32 ಲಕ್ಷ ಮತ್ತು ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಗ್ರಾಸ್‌ಲ್ಯಾಂಡ್ ಬೀಜ್, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್ ಹಾಗೂ ಅಟ್ಲಾಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,498 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ಇದು 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
'ಟಾಟಾ ನೆಕ್ಸಾನ್' ಎಲೆಕ್ಟ್ರಿಕ್ ಎಸ್‌ಯುವಿಯು ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 30 ರಿಂದ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಈಚೆಗೆ ಬಿಡುಗಡೆಯಾದ ಟಾಟಾ ಪಂಚ್ ಫೇಸ್‌ಲಿಫ್ಟ್ ಹೇಗಿದೆ:
ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್) ಮತ್ತು ಸೈಂಟಿಫಿಕ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 193 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ಹೊಂದಿದೆ.
ಈ ಕಾರು 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಟೈಪ್-ಸಿ ಫಾಸ್ಟ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








