Tata: ಅಬ್ಬರಿಸಿದ ಟಾಟಾ.. ಮುಗಿಬಿದ್ದ ಜನ.. ಈ ಗುಣಮಟ್ಟದ ಕಾರು ನಂ.1.. ಬರೀ 7 ಲಕ್ಷ ರೂಪಾಯಿ!
ಟಾಟಾ ನೆಕ್ಸಾನ್ (Tata Nexon) ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಫೆಬ್ರವರಿ - 2026) ದೊಡ್ಡ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದ್ದು, ನಂಬರ್ 1 ಎಸ್‌ಯುವಿಯಾಗಿ ಹೊರಹೊಮ್ಮಿದೆ. ಒಟ್ಟು 19,430 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಇದೇ ಜನವರಿಯಲ್ಲಿಯೂ ಮೊದಲ ಸ್ಥಾನದಲ್ಲಿತ್ತು. ಸರಿ ಸುಮಾರು 23,365 ಯುನಿಟ್‌ಗಳನ್ನು ಮಾರಲಾಗಿತ್ತು.
ನೂತನ 'ಟಾಟಾ ನೆಕ್ಸಾನ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಅಗ್ಗದ ದರದಲ್ಲೂ ಲಭ್ಯವಿದ್ದು, ಜೊತೆಗೆ ಸಾಕಷ್ಟು ಗಟ್ಟಿಮುಟ್ಟಾಗಿದೆ. ಹೀಗಾಗಿ, ಮಾರಾಟ ಸಂಖ್ಯೆಯೂ ಹೆಚ್ಚಳಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ಸ್ಟ್ಯಾಂಡರ್ಡ್ 'ಟಾಟಾ ನೆಕ್ಸಾನ್' ವಿಶೇಷತೆಗಳೇನು:
ಈ ಎಸ್‌ಯುವಿಯು ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್, ಫಿಯರ್‌ಲೆಸ್ ಮತ್ತು ಫಿಯರ್‌ಲೆಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್‌ಲೈಟ್‌ಗಳನ್ನು ತನ್ನದಾಗಿಸಿಕೊಂಡಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,498 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ನೆಕ್ಸಾನ್' 1.2-ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಕಾರು 5-ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ಇವಿ ಹೇಗಿದೆ:
ಇದು ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್ ಹಾಗೂ ಕ್ರಿಯೇಟಿವ್ ಓಷನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,498 ಎಂಎಂ ವೀಲ್‌ಬೇಸ್‌ನ್ನು
ನೂತನ 'ನೆಕ್ಸಾನ್ ಇವಿ' 5-ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
Image Source: Youtube/ BMC HD Videos


Click it and Unblock the Notifications








