ಸದ್ದಿಲ್ಲದೇ ನಂ.1 ಆಯ್ತು ಈ ಜನಪ್ರಿಯ ಟಾಟಾ ಕಾರು.. 24 Km ಮೈಲೇಜ್.. 7.32 ಲಕ್ಷಕ್ಕೆ ಸಿಗುತ್ತೆ!

ಟಾಟಾ ನೆಕ್ಸಾನ್ (Tata Nexon) ಜಗಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯೇ ಮಾರಾಟಗೊಂಡಿದೆ. ಒಟ್ಟು 23,365 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025 ಇದೇ ಅವಧಿಯಲ್ಲಿ 15,397 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಶಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 51.75% ಬೆಳವಣಿಗೆಯಾಗಿದೆ.

ಸ್ಟ್ಯಾಂಡರ್ಡ್ 'ಟಾಟಾ ನೆಕ್ಸಾನ್' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್ (Smart), ಸ್ಮಾರ್ಟ್ ಪ್ಲಸ್ (Smart Plus), ಪ್ಯೂರ್ (Pure), ಪ್ಯೂರ್ ಪ್ಲಸ್ (Pure Plus), ಕ್ರಿಯೇಟಿವ್ (Creative), ಕ್ರಿಯೇಟಿವ್ ಪ್ಲಸ್ (Creative Plus), ಫಿಯರ್‌ಲೆಸ್ (Fearless) ಹಾಗೂ ಫಿಯರ್‌ಲೆಸ್ ಪ್ಲಸ್ (Fearless Plus) ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

Tata Nexon 23 365 Cars Sold In 2026 January Details

ಈ ಕಾರಿನ ವಿನ್ಯಾಸವು ಅದ್ಭುತವಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ, ಕಾರ್ಬನ್ ಬ್ಲ್ಯಾಕ್ & ಅಟ್ಲಾಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಟಾಟಾ ನೆಕ್ಸಾನ್' ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 118 ಪಿಎಸ್ ಅಶ್ವ ಶಕ್ತಿ ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5 ಲೀ. ಡೀಸೆಲ್ ಎಂಜಿನ್, 113 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Tata Nexon 23 365 Cars Sold In 2026 January Details

ಇನ್ನೊಂದು 1.2-ಲೀ. ಸಿಎನ್‌ಜಿ ಎಂಜಿನ್, 99 ಪಿಎಸ್ ಅಶ್ವ ಶಕ್ತಿ ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 24 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಹೊಸ 'ನೆಕ್ಸಾನ್' 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 350 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Tata Nexon 23 365 Cars Sold In 2026 January Details

'ಟಾಟಾ ನೆಕ್ಸಾನ್ ಇವಿ' ಸಹ ಖರೀದಿಗೆ ಲಭ್ಯ:

ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್ ಹಾಗೂ ಕ್ರಿಯೇಟಿವ್ ಓಷನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 30 ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್‌ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

Image Source Link: Youtube

More from DriveSpark

Article Published On: Monday, February 2, 2026, 18:09 [IST]
English summary
Tata nexon 23365 cars sold in 2026 january details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+