ಟಾಟಾ ನೆಕ್ಸಾನ್ vs ಕಿಯಾ ಸೋನೆಟ್: ಇವೆರೆಡು 5-ಸೀಟರ್‌ನ ಅಗ್ಗದ ಕಾರುಗಳು.. ಯಾವುದು ಬೆಸ್ಟ್?

ಟಾಟಾ ನೆಕ್ಸಾನ್ (Tata Nexon) ಪ್ರಖ್ಯಾತ ಎಸ್‌ಯುವಿಯಾಗಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದಕ್ಕೆ ಕಿಯಾ ಸೋನೆಟ್ (Kia Sonet) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಕಾರುಗಳು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನಾವಿಲ್ಲಿ ಇವೆರೆಡು ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತು ಹೋಲಿಕೆ ಮಾಡಿದ್ದೇವೆ.

ಬೆಲೆ (Price):

ಹೊಚ್ಚ ಹೊಸ 'ಟಾಟಾ ನೆಕ್ಸಾನ್' ರೂ.7.32 ಲಕ್ಷದಿಂದ ರೂ.14.15 ಲಕ್ಷ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಕಿಯಾ ಸೋನೆಟ್' ರೂ.7.30 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ ಎರಡು ಕಾರುಗಳು ಹೆಚ್ಚು-ಕಮ್ಮಿ ಸಮಬಲ ಸಾಧಿಸಿವೆ.

Tata Nexon vs Kia Sonet Which Suv Best Details

ವಿನ್ಯಾಸ (Design):

ಈ ಎಸ್‌ಯುವಿಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಟಾಟಾ ನೆಕ್ಸಾನ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

'ಕಿಯಾ ಸೋನೆಟ್' ಕಾರು ಸಹ ಉತ್ತಮವಾಗಿರುವ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲೈಟ್‌ಗಳನ್ನು ಒಳಗೊಂಡಿದೆ. ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಇಂಟೆನ್ಸ್ ರೆಡ್, ಇಂಪೀರಿಯಲ್ ಬ್ಲೂ ಹಾಗೂ ಕ್ಲಿಯರ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2500 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Tata Nexon vs Kia Sonet Which Suv Best Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಟಾಟಾ ನೆಕ್ಸಾನ್ ಹಾಗೂ ಕಿಯಾ ಸೋನೆಟ್ ಎಸ್‌ಯುವಿಗಳೆರಡು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 'ನೆಕ್ಸಾನ್' 350 ಲೀಟರ್ ಮತ್ತು 'ಸೋನೆಟ್' 385 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಈ ಎಸ್‌ಯುವಿಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿವೆ. 'ಟಾಟಾ ನೆಕ್ಸಾನ್' 1.2-ಲೀ. ಪೆಟ್ರೋಲ್, 1.5 ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 24 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ 'ಕಿಯಾ ಸೋನೆಟ್' ಕಾರು 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 18.6 ರಿಂದ 22.3 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಇವೆರೆಡು ಎಸ್‌ಯುವಿಗಳು ಹೆಚ್ಚು ಅತ್ಯಾಧುನಿಕವಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿವೆ. 'ಟಾಟಾ ನೆಕ್ಸಾನ್' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್‌ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹೊಸ 'ಕಿಯಾ ಸೋನೆಟ್' 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Friday, January 23, 2026, 11:05 [IST]
English summary
Tata nexon vs kia sonet which suv best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+