ನಂ.1 ಟಾಟಾ ನೆಕ್ಸಾನ್ vs ಮಾರುತಿ ಫ್ರಾಂಕ್ಸ್: ಅಗ್ಗದ ಎಸ್‌ಯುವಿಗಳಿವು.. 5-ಸೀಟರ್.. ಯಾವುದು ಬೆಸ್ಟ್?
ಟಾಟಾ ನೆಕ್ಸಾನ್ (Tata Nexon) ನಂಬರ್ 01 ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ನೇರವಾದ ಎದುರಾಳಿಯಾಗಿದೆ. ಈ ಕಾರುಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ. ನಾವಿಲ್ಲಿ ಇವೆರೆಡು ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬೆಲೆ & (Price):
ನೂತನ 'ಟಾಟಾ ನೆಕ್ಸಾನ್' ರೂ.7.32 ಲಕ್ಷದಿಂದ ರೂ.14.05 ಲಕ್ಷ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಮಾರುತಿ ಫ್ರಾಂಕ್ಸ್' ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ 'ನೆಕ್ಸಾನ್'ಗೆ ಹೋಲಿಕೆ ಮಾಡಿದರೆ 'ಫ್ರಾಂಕ್ಸ್' ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ ಎಂದು ಹೇಳಬಹುದು.

ವಿನ್ಯಾಸ (Design):
ಈ ಎಸ್‌ಯುವಿಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಹೊಂದಿವೆ. 'ಟಾಟಾ ನೆಕ್ಸಾನ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಓಷನ್ ಬ್ಲೂ, ರಾಯಲ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,498 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
'ಮಾರುತಿ ಸುಜುಕಿ ಫ್ರಾಂಕ್ಸ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಗ್ರೇಂಡಿಯರ್ ಗ್ರೇ & ಆಪುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇವೆರೆಡು ಕಾರುಗಳು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 'ನೆಕ್ಸಾನ್' 350 ಲೀಟರ್ ಹಾಗೂ 'ಫ್ರಾಂಕ್ಸ್' 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಕಾರ್ಯಕ್ಷಮತೆ (Performance):
ಈ ಎಸ್‌ಯುವಿಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ನೆಕ್ಸಾನ್' 1.2-ಲೀ. ಪೆಟ್ರೋಲ್, 1.5-ಲೀ. ಡೀಸೆಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 24 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.
'ಫ್ರಾಂಕ್ಸ್' 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು (features):
ಇವೆರೆಡು ಕಾರುಗಳು ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ. 'ಟಾಟಾ ನೆಕ್ಸಾನ್' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾನ್ನು ಒಳಗೊಂಡಿದೆ.
'ಮಾರುತಿ ಫ್ರಾಂಕ್ಸ್' 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ರೇರ್ ಎಸಿ ವೆಂಟ್‌ಗಳು, ಸ್ಲೈಡಿಂಗ್ ಫ್ರಂಟ್ ಆರ್ಮ್‌ರೆಸ್ಟ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








