TATA: ಮಧ್ಯಮ ವರ್ಗದವರ ಡ್ರೀಮ್ ಕಾರಿದು.. ಬರೀ 6.49 ಲಕ್ಷ ರೂಪಾಯಿ.. ಈ ವಾರವೇ ನೂತನ ಎಸ್‌ಯುವಿ ಡೆಲಿವರಿ!

ಜನವರಿ 20ರಂದು ಮುಂಬೈ ನಗರದಲ್ಲಿ ಜರುಗಿದ ಅದ್ದೂರಿ ಕಾರ್ಯಕ್ರಮದಲ್ಲಿ 2026ರ ಹೊಚ್ಚ ಹೊಸ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಕಾರನ್ನು ಮಾರಾಟಕ್ಕೆ ತರಲಾಯಿತು. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ನೋಡಲು ಕೂಡ ತುಂಬಾ ಚೆನ್ನಾಗಿದೆ. ಈ ತಿಂಗಳಾಂತ್ಯದ ವೇಳೆಗೆ ವಿತರಣೆಯು ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಅಂದರೆ ಇದೇ ವಾರದಿಂದ ಗ್ರಾಹಕರ ಮನೆಗಳನ್ನು ತಲುಪಲಿದೆ. ಬನ್ನಿ, ನೂತನ 'ಪಂಚ್ ಇವಿ'ಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಈ ಕಾರು ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಡಿ ಸಹ ಖರೀದಿ ಲಭ್ಯವಿದೆ. ಆ ಮಾಡೆಲ್ ಬೆಲೆಯೂ ರೂ.6.49 ಲಕ್ಷದಿಂದ ಶುರುವಾಗುತ್ತದೆ. ಗ್ರಾಹಕರು ಪ್ರತಿ ಕಿಲೋಮೀಟರ್‌ಗೆ ರೂ.2.60 ಬಾಡಿಗೆ ಕಟ್ಟಬೇಕು.

Tata Punch EV Facelift Delivery Start Soon Details

ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸಿ-ಪಿಲ್ಲರ್ ಮೌಂಟೆಡ್ ರೇರ್ ಡೋರ್ ಹ್ಯಾಂಡಲ್‌ಗಳು ಮತ್ತು 16-ಇಂಚಿನ ಅಲಾಯ್‌ ವೀಲ್‌ಗಳನ್ನು ಪಡೆದಿದೆ. ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 3827 ಎಂಎಂ ಉದ್ದ, 1742 ಎಂಎಂ ಅಗಲ ಹಾಗೂ 1,615 ಎಂಎಂ ಎತ್ತರವಿದೆ. ಜೊತೆಗೆ 195 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1,360 ಕೆಜಿ ತೂಕವಿದೆ.

Tata Punch EV Facelift Delivery Start Soon Details

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 365 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಸಿಟಿ, ಇಕೋ ಹಾಗೂ ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿಯು ಅಂದಾಜು 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ಗರಿಷ್ಠ ವೇಗವನ್ನು ಪಡೆಯಲಿದೆ. ಇದರಲ್ಲಿರುವ ಬ್ಯಾಟರಿಯು 65 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಉಪಯೋಗದಲ್ಲಿ 26 ನಿಮಿಷದಲ್ಲೇ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ನೂತನ 'ಪಂಚ್ ಇವಿ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.2-ಇಂಚಿನ ಸೆಂಟ್ರಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸಿಂಗಲ್-ಪೇನ್ ಸನ್‌ರೂಫ್‌ ಮತ್ತು ಪ್ಯಾಡಲ್ ಶಿಫ್ಟರ್‌ಗಳನ್ನು ಪಡೆದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್-ಸ್ಟಾರ್ಟ್ ಅಸಿಸ್ಟ್‌ನ್ನು ಹೊಂದಿದೆ.

More from DriveSpark

Article Published On: Monday, February 23, 2026, 16:35 [IST]
English summary
Tata punch ev facelift delivery start soon details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+