Tata: ಈ ಕಾರಿಗೆ ಪೆಟ್ರೋಲ್ ಬೇಕಿಲ್ಲ.. ಒಂದೇ ಚಾರ್ಜ್‌ನಲ್ಲಿ 593 ಕಿ.ಮೀ ರೇಂಜ್.. ಕಡಿಮೆ ಬೆಲೆಗೆ ಹೊಸ ಟಾಟಾ ಎಸ್‌ಯುವಿ!

ಬಹುನಿರೀಕ್ಷಿತ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 20 ರಂದು ಅದ್ದೂರಿಯಾಗಿ ಮಾರಾಟಕ್ಕೂ ಬರಲಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಸದ್ಯ, ಕಂಪನಿಯು ಇದೇ 'ಪಂಚ್ ಇವಿ' ಕುರಿತಂತೆ ಒಂದೊಂದೆ ವಿಚಾರಗಳನ್ನು ಬಹಿರಂಗಪಡಿಸುತ್ತಿದೆ.

ಮೊನ್ನೆಯಷ್ಟೇ ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್'ನ್ನು ಹೈಪರ್‌ಮೈಲಿಂಗ್ ಟೆಸ್ಟ್‌ಗೂ ಒಳಪಡಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಕಂಪನಿಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲೂ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ. ಆಟೋಮೊಬೈಲ್ ಪತ್ರಕರ್ತರೊಬ್ಬರು, ಮೊದಲಿಗೆ ಸಂಪೂರ್ಣ ಚಾರ್ಜ್‌ನಲ್ಲಿ ಹೊಸ 'ಪಂಚ್ ಇವಿ'ಯನ್ನು ರಾಜಸ್ಥಾನದ ಜೈಪುರದಿಂದ ಉದಯಪುರದವರೆಗೆ 400 ಕಿಲೋಮೀಟರ್ ಡ್ರೈವ್ ಮಾಡಲು ತೀರ್ಮಾನಿಸುತ್ತಾರೆ.

Tata Punch EV Facelift Hypermiling Test 593 Km Range On Single Charge Details

ಹಾಗೆಯೇ ಚಾಲನೆಯನ್ನು ಶುರು ಮಾಡುತ್ತಾರೆ. ಬಿಜೈನಗರವರೆಗೆ ಅರ್ಧದಷ್ಟು (200 ಕಿಲೋಮೀಟರ್) ದೂರವನ್ನು ಯಶಸ್ವಿಯಾಗಿಯೂ ಕ್ರಮಿಸುತ್ತದೆ. ಆ ಬಳಿಕವು, 67% ಚಾರ್ಜ್ ಉಳಿದಿರುತ್ತದೆ. ಉದಯಪುರ ಮುಟ್ಟಿದಾಗ, ಇನ್ನು 34% ಚಾರ್ಜ್ ಇರುತ್ತದೆ. ಮತ್ತೆ ಕಾರನ್ನು ಚಾಲು ಮಾಡುತ್ತಿದ್ದಾರೆ. ಕಡೆಗೆ ಗುಜರಾತ್‌ನ ಹಿಮತ್‌ನಗರದಲ್ಲಿ ಪೂರ್ತಿಯಾಗಿ ಚಾರ್ಜ್ ಖಾಲಿಯಾಗುತ್ತದೆ. ಒಟ್ಟು 593.6 ಕಿಲೋಮೀಟರ್ ಓಡಿರುತ್ತದೆ.

ಈವರೆಗೆ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಪವರ್‌ಟ್ರೇನ್‌ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೂ ಈ ಪರೀಕ್ಷೆ ಗಮಸಿದಾಗ, ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರುವುದು ಬಹುತೇಕ ಖಚಿತವಾಗಿದೆ. 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಇದರೊಂದಿಗೆ ಪ್ರಸ್ತುತವಿರುವ 25 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 35 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಮುಂದುವರಿಯುವ ಸಾಧ್ಯತೆಯಿದೆ. ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಸಹ ಐಸಿಇ ಮಾಡೆಲ್‌ನಂತೆಯೇ ವಿನ್ಯಾಸವನ್ನು ಪಡೆದಿದೆ. ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ಅದು ದೃಢಪಟ್ಟಿದೆ. ತುಂಬಾ ಚೆನ್ನಾಗಿರುವ ಕ್ಲೋಸ್ಡ್-ಆಫ್ ಗ್ರಿಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಬ್ಲ್ಯಾಕ್-ಔಟ್ ರೂಫ್, ಸಿ-ಪಿಲ್ಲರ್ ಮೌಂಟೆಡ್ ರೇರ್ ಡೋರ್ ಹ್ಯಾಂಡಲ್‌ಗಳು ಮತ್ತು ಅಲಾಯ್‌ ವೀಲ್‌ಗಳನ್ನು ಒಳಗೊಂಡಿದೆ.

ಈ ಕಾರು ಸಾಕಷ್ಟು ವಿಶಾಲವಾಗಿರಲಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿರಲಿದೆ. 5 ಆಸನಗಳನ್ನು ಪಡೆದಿರಲಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ದೊಡ್ಡದಾದ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರಬಹುದು ಎನ್ನಲಾಗಿದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 2-ಸ್ಪೋಕ್ ಸ್ಟೀರಿಂಗ್ ವೀಲ್, ಪುಶ್ ಬಟನ್ ಸ್ಟಾರ್ಟ್‌, ಟೈಪ್-ಸಿ ಫಾಸ್ಟ್ ಚಾರ್ಜರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಹಾಗೂ ಸನ್‌ರೂಫ್‌ನ್ನು ಹೊಂದಿರುವ ಸಾಧ್ಯತೆಯಿದೆ.

ಹೊಸ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಿಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುವ ನಿರೀಕ್ಷೆಯಿದೆ. ಕನಿಷ್ಠ ರೂ.10 ಲಕ್ಷ ಹಾಗೂ ಗರಿಷ್ಠ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಇದಕ್ಕೆ ಸಿಟ್ರನ್ ಇಸಿ3 ಮತ್ತು ಎಂಜಿ ವಿಂಡ್ಸರ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Monday, February 16, 2026, 11:18 [IST]
English summary
Tata punch ev facelift hypermiling test 593 km range on single charge details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+