TATA: ದೇಶವೇ ಕಾಯುತ್ತಿದೆ.. ಅತಿ ಶೀಘ್ರದಲ್ಲೇ ನೂತನ ಟಾಟಾ Suv ಬಿಡುಗಡೆ, 590 Km ಓಡುತ್ತೆ.. ಬೆಲೆ ಎಷ್ಟು, ವಿಶೇಷತೆಗಳೇನು?

ನವೀಕರಣಗೊಂಡ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಬರುವಿಕೆಗಾಗಿ ದೇಶವೇ ಎದುರು ನೋಡುತ್ತಿದೆ. ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಈ ಎಲೆಕ್ಟ್ರಿಕ್ ಎಸ್‌ಯುವಿಯು ಇದೇ 20ರಂದು ಮಾರಾಟಕ್ಕೆ ಬರಲಿದ್ದು, ಹಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ಬನ್ನಿ, ಈ 'ಪಂಚ್ ಇವಿ ಫೇಸ್‌ಲಿಫ್ಟ್'ನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ. ಕನಿಷ್ಠ ರೂ.10.61 ಲಕ್ಷ ಹಾಗೂ ಗರಿಷ್ಠ15.32 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಖರೀದಿಸಲು ಸಾಧ್ಯವಾಗಲಿದೆ.

Tata Punch EV Facelift Launch Soon In India Expected Price Range And Features Details

ವಿನ್ಯಾಸ (Design):

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್ 'ಪಂಚ್' ಕಾರಿಗೆ ಬಹುತೇಕ ಹೋಲಿಕೆಯಾಗುತ್ತದೆ. ಪರೀಕ್ಷಾರ್ಥ ಸಂಚಾರ ನಡೆಸುವಾಗ ಅದು ದೃಢಪಟ್ಟಿದೆ. ತುಂಬಾ ಚೆನ್ನಾಗಿರುವ ಕ್ಲೋಸ್ಡ್-ಆಫ್ ಗ್ರಿಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಬ್ಲ್ಯಾಕ್-ಔಟ್ ರೂಫ್ ಮತ್ತು ಅಲಾಯ್‌ ವೀಲ್‌ಗಳನ್ನು ಒಳಗೊಂಡಿದೆ.

ಸುತ್ತಳತೆ (Dimensions):

ಇದರ ಸುತ್ತಳತೆಯಲ್ಲಿಯೂ ಯಾವುದೇ ಮಾರ್ಪಾಡುಗಳಿರುವುದಿಲ್ಲ. ಪ್ರಸ್ತುತ ಲಭ್ಯವಿರುವ 'ಪಂಚ್ ಇವಿ' ರೀತಿಯಲ್ಲಿ 3,857 ಮಿ.ಮೀ ಉದ್ದ, 1,742 ಮಿ.ಮೀ ಅಗಲ ಹಾಗೂ 1,633 ಮಿ.ಮೀ ಎತ್ತರವಿವು ಇರಲಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಆರಾಮದಾಯಕವಾಗಿರುವ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಅಥವಾ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು 66 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಕಾರ್ಯಕ್ಷಮತೆ (Performance):

ಈ ಕಾರು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿರುವ ಸಾಧ್ಯತೆಯಿದೆ. 25 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 35 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 315 ರಿಂದ 590 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ ಎಂಬುದು ಬಹುತೇಕ ಖಚಿತವಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 2-ಸ್ಪೋಕ್ ಸ್ಟೀರಿಂಗ್ ವೀಲ್, ಪುಶ್-ಬಟನ್ ಸ್ಟಾರ್ಟ್‌, ಟೈಪ್-ಸಿ ಫಾಸ್ಟ್ ಚಾರ್ಜರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್‌ ಮತ್ತು ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್ ಮತ್ತು ರೇರ್-ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿರಬಹುದು ಎನ್ನಲಾಗಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars):

ಇದಕ್ಕೆ ಹಲವು ಪ್ರತಿಸ್ಪರ್ಧಿಗಳಿವೆ. ಸಿಟ್ರನ್ ಇಸಿ3 (Citroen eC3), ಎಂಜಿ ವಿಂಡ್ಸರ್ ಇವಿ (MG Windsor EV), ವಿನ್‌ಫಾಸ್ಟ್ ವಿಎಫ್6 (Vinfast VF6) ಮತ್ತು ಎಂಜಿ ಕಾಮೆಟ್ ಇವಿ (MG Comet EV) ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಲಿವೆ.

More from DriveSpark

Article Published On: Tuesday, February 17, 2026, 13:17 [IST]
English summary
Tata punch ev facelift launch soon in india expected price range and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+