Tata: ಬಿಡುಗಡೆಗೂ ಮೊದಲೇ ರಸ್ತೆಗೆ ಬಂತು ಹೊಸ ಟಾಟಾ ಕಾರು.. ಬೆಲೆ ಎಷ್ಟು, ವಿಶೇಷತೆಗಳೇನು?
ಅತಿ ಶೀಘ್ರದಲ್ಲೇ ಹೊಚ್ಚ ಹೊಸ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯು ನೋಡಲು ಆಕರ್ಷಕವಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ನೂತನ 'ಪಂಚ್ ಇವಿ' ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಸದ್ಯ, ಇದೇ ಕಾರು ಯಾವುದೇ ರೀತಿಯಲ್ಲಿ ಮರೆಮಾಚದೆ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಪ್ರಾಯೋಗಿಕ ಓಡಾಟದ ಸಂದರ್ಭದಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಐಸಿಇ (ICE) ಮಾಡೆಲ್‌ನಂತೆಯೇ ವಿನ್ಯಾಸವನ್ನು ಹೊಂದಿದೆ. ನವೀನವಾದ ಕ್ಲೋಸ್ಡ್-ಆಫ್ ಗ್ರಿಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಬ್ಲ್ಯಾಕ್-ಔಟ್ ಪಿಲರ್‌ಗಳು & ರೂಫ್, ಸಿ-ಪಿಲ್ಲರ್ ಮೌಂಟೆಡ್ ರೇರ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ.

ನೂತನ 'ಪಂಚ್ ಇವಿ ಫೇಸ್‌ಲಿಫ್ಟ್' ಗಾತ್ರದಲ್ಲೂ ವ್ಯತ್ಯಾಸವಿರುವುದಿಲ್ಲ. ಪ್ರಸ್ತುತ ಖರೀದಿಗೆ ಲಭ್ಯವಿರುವ 'ಪಂಚ್ ಇವಿ'ಯಂತೆಯೇ ಇರಲಿದೆ. 3,857 ಎಂಎಂ ಉದ್ದ, 1,742 ಎಂಎಂ ಅಗಲ ಮತ್ತು 1,633 ಎಂಎಂ ಎತ್ತರವಿರಲಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಎಂಎಂ ವೀಲ್‌ಬೇಸ್‌ನ್ನು ಹೊಂದಿರಲಿದೆ.
ಇದು ಸ್ಟ್ಯಾಂಡರ್ಡ್ 'ಪಂಚ್ ಇವಿ'ಯ ರೀತಿಯಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಯಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ದೊಡ್ಡ ಗಾತ್ರದ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರುವ ನಿರೀಕ್ಷೆಯಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನಲ್ಲಿಯೂ ಬದಲಾವಣೆಗಳಿರುವುದಿಲ್ಲ. ಈಗಿರುವ ಕಾರಿನಂತೆ 25 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 35 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ.
ಹೊಸ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ವಿನೂತನವಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿರಲಿದೆ. ಅದಕ್ಕೆ ತಕ್ಕಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿರಲಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 2-ಸ್ಪೋಕ್ ಸ್ಟೀರಿಂಗ್ ವೀಲ್, ಪುಶ್ ಬಟನ್ ಸ್ಟಾರ್ಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳನ್ನು ಒಳಗೊಂಡಿರಲಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.
ನೂತನ 'ಪಂಚ್ ಇವಿ ಫೇಸ್‌ಲಿಫ್ಟ್' ಸ್ಪರ್ಧಾತ್ಮಕ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ. ಇದೇ 20ರಂದು ಮಾರಾಟಕ್ಕೂ ತರಲಾಗುತ್ತದೆ. ರೂ.10 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.
ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿರಲಿವೆ. ಬಹುಮುಖ್ಯವಾಗಿ ಸಿಟ್ರನ್ ಇಸಿ3 (Citroen eC3), ಎಂಜಿ ವಿಂಡ್ಸರ್ ಇವಿ (MG Windsor EV) ಹಾಗೂ ಎಂಜಿ ಕಾಮೆಟ್ ಇವಿ (MG Comet EV) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
Source Like: Car&Bike.Com


Click it and Unblock the Notifications








