Tata: ಕೇವಲ 6.49 ಲಕ್ಷ ರೂಪಾಯಿ.. 468 Km ರೇಂಜ್, ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ.. ಪ್ರತಿಸ್ಪರ್ಧಿಗಳಿಗೆ ನಡುಕ!
ಮುಂಬೈನಲ್ಲಿ ಅದ್ದೂರಿಯಾಗಿ ಸಮಾರಂಭದಲ್ಲಿ ನೂತನ 2026ರ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಇದೊಂದು ಎಲೆಕ್ಟ್ರಿಕ್ ಮೈಕ್ರೋ ಎಸ್‌ಯುವಿಯಾಗಿದೆ. ಹಲವು ನವೀಕರಣಕ್ಕೆ ಒಳಗಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ ಸ್ಟ್ಯಾಂಡರ್ಡ್ ಆಗಿ ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದೇ ಕಾರನ್ನು ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಡಿಯೂ ಮಾರಾಟಗೊಳಿಸಲಾಗುತ್ತದೆ. ಆ ಮಾಡೆಲ್ ರೂ.6.49 ಲಕ್ಷ ಆರಂಭಿಕ ದರವನ್ನು ಹೊಂದಿದೆ. ಗ್ರಾಹಕರು ಪ್ರತಿ ಕಿಲೋಮೀಟರ್ ಚಾಲನೆಗೆ ರೂ.2.60 ಬಾಡಿಗೆ ಪಾವತಿಸಬೇಕು. ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಹಾಗೂ ಎಂಪವರ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಮುಂಭಾಗ (ಫ್ರಂಟ್) ನವೀನವಾಗಿರುವ ಕ್ಲೋಸ್ಡ್-ಆಫ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ಪಡೆದಿದೆ. 'ಟಾಟಾ' ಲೋಗೋದ ಹಿಂದೆ ಚಾರ್ಜಿಂಗ್ ಪೋರ್ಟ್‌ನ್ನು ಇರಿಸಲಾಗಿದೆ. ಹಾಗೆಯೇ ಬ್ಲ್ಯಾಕ್-ಔಟ್ ರೂಫ್, ಸಿ-ಪಿಲ್ಲರ್ ಮೌಂಟೆಡ್ ರೇರ್ ಡೋರ್ ಹ್ಯಾಂಡಲ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹಿಂಭಾಗ (ರೇರ್) ಕಣ್ಣು ಕುಕ್ಕುವಂತಹ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ.
ನೂತನ ಪಂಚ್ ಇವಿ ಫೇಸ್‌ಲಿಫ್ಟ್ ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಸೂಪರ್‌ನೋವಾ ಕಾಪರ್ ಹಾಗೂ ಪ್ಯೂರ್ ಗ್ರೇ ಎಂಬ 7 ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದೆ. 3827 ಮಿ.ಮೀ ಉದ್ದ, 1742 ಮಿ.ಮೀ ಅಗಲ ಹಾಗೂ 1,615 ಮಿ.ಮೀ ಎತ್ತರವಿದೆ. 195 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು ಬಲಿಷ್ಠವಾದ ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 365 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಬ್ಯಾಟರಿಯು 65 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ 26 ನಿಮಿಷಗಳಲ್ಲಿಯೇ 0 ರಿಂದ 80% ಚಾರ್ಜ್ ಆಗುತ್ತದೆ.
ಇದರ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಸಿಟಿ, ಇಕೋ ಹಾಗೂ ಸ್ಪೋರ್ಟ್ ಎಂಬ ಮೂರು ಡ್ರೈವಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಬರೀ 9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ಗರಿಷ್ಠ ವೇಗವನ್ನು ಪಡೆಯಲಿದೆ.

ಹೊಸ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.2-ಇಂಚಿನ ಸೆಂಟ್ರಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸಿಂಗಲ್-ಪೇನ್ ಸನ್‌ರೂಫ್‌ನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಇದಕ್ಕೆ ಯಾವುದೇ ನೇರವಾದ ಎದುರಾಳಿಯಿಲ್ಲ. ಆದರೂ ಎಂಜಿ ವಿಂಡ್ಸರ್ ಇವಿ (MG Windsor EV), ಸಿಟ್ರನ್ ಇಸಿ3 (Citroen eC3) ಹಾಗೂ ಎಂಜಿ ಕಾಮೆಟ್ ಇವಿ (MG Comet EV) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








