TATA: ಅಗ್ಗದ ಹೊಸ ಟಾಟಾ ಎಸ್‌ಯುವಿಗಾಗಿ ಕ್ಯೂ ನಿಲ್ಲಬೇಕಾಗುತ್ತದೆ.. ಈ ನಂ.1 ಕಾರಿಗೆ ಬೈ ಬೈ ಹೇಳುವರೇ.. ಯಾವುದು ಬೆಸ್ಟ್?

ನಿನ್ನೆ 2026ರ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಕಾರನ್ನು ಬಿಡುಗಡೆಗೊಳಿಸಲಾಗಿದೆ. ಇದಕ್ಕೆ ಎಂಜಿ ವಿಂಡ್ಸರ್ ಇವಿ (MG Windsor EV) ನೇರವಾದ ಎದುರಾಳಿಯಾಗಿದೆ. ಇವೆರೆಡು ಎಲೆಕ್ಟ್ರಿಕ್ ಎಸ್‌ಯುವಿಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಒಳಗೊಂಡಿವೆ. ನಾನಾ ಬಗೆಯ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಕಾರುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿವೆ. ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಕನಿಷ್ಠ ರೂ.9.69 ಲಕ್ಷ ಮತ್ತು ಗರಿಷ್ಠ ರೂ.12.59 ಲಕ್ಷ ದರವನ್ನು ಹೊಂದಿದೆ. ಅದೇ ರೀತಿಯಲ್ಲಿ 'ಎಂಜಿ ವಿಂಡ್ಸರ್ ಇವಿ' ರೂ.14 ಲಕ್ಷದಿಂದ ರೂ.18.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

Tata Punch EV Facelift vs MG Windsor Which Suv Best Comparison

'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಎಸ್‌ಯುವಿಯನ್ನು ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಡಿಯಲ್ಲಿಯೂ ಮಾರಲಾಗುತ್ತದೆ. ಈ ಮಾಡೆಲ್ ಬೆಲೆ ರೂ.6.49 ಲಕ್ಷದಿಂದ ಶುರುವಾಗುತ್ತದೆ. ಖರೀದಿದಾರರು ಪ್ರತಿ ಕಿಲೋಮೀಟರ್ ಚಾಲನೆಗೆ ರೂ.2.60 ಬಾಡಿಗೆ ಕಟ್ಟಬೇಕು. 'ಎಂಜಿ ವಿಂಡ್ಸರ್ ಇವಿ'ಯು ಬಾಸ್ ಯೋಜನೆಯಡಿಯಲ್ಲಿಯೇ ಸಿಗುತ್ತದೆ. ಇದರ ದರವು ರೂ.9.99 ಲಕ್ಷದಿಂದ ಪ್ರಾರಂಭವಾಗುತ್ತದೆ. 1 ಕಿಲೋಮೀಟರ್‌ಗೆ ರೂ.3.50 ಬಾಡಿಗೆಯನ್ನು ಪಾವತಿ ಮಾಡಬೇಕು.

ವಿನ್ಯಾಸ (Design):

ಈ ಎಲೆಕ್ಟ್ರಿಕ್ ಎಸ್‌ಯುವಿಗಳು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿವೆ. 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್‌ ವೀಲ್‌ಗಳನ್ನು ಒಳಗೊಂಡಿದೆ. ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಸೂಪರ್‌ನೋವಾ ಕಾಪರ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Tata Punch EV Facelift vs MG Windsor Which Suv Best Comparison

'ಎಂಜಿ ವಿಂಡ್ಸರ್ ಇವಿ' ಸಹ ಚೆನ್ನಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟಾರಿ ಬ್ಲ್ಯಾಕ್, ಟರ್ಕೋಯಿಸ್ ಗ್ರೀನ್, ಅರೋರಾ ಸಿಲ್ವರ್, ಸೆಲಾಡಾನ್ ಬ್ಲೂ ಹಾಗೂ ಗ್ಲೇಜ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance):

ಇವೆರೆಡು ಕಾರುಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಪಂಚ್ ಇವಿ ಫೇಸ್‌ಲಿಫ್ಟ್' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 365 ರಿಂದ 468 ಕಿಲೋಮೀಟರ್‌ವರೆಗೆ ರೇಂಜ್ ಕೊಡುತ್ತದೆ. 'ಎಂಜಿ ವಿಂಡ್ಸರ್ ಇವಿ'ಯು 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 331 ರಿಂದ 449 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ವಿಂಡ್ಸರ್ ಇವಿಗೆ ಹೋಲಿಸಿದರೆ 'ಪಂಚ್ ಇವಿ' ಸ್ವಲ್ಪ ಮಟ್ಟಿಗೆ ಹೆಚ್ಚಿನ ದೂರ ಓಡಬಲ್ಲದು.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಎಲೆಕ್ಟ್ರಿಕ್ ಎಸ್‌ಯುವಿಗಳು 5 ಆಸನಗಳನ್ನು ಒಳಗೊಂಡಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 'ಟಾಟಾ ಪಂಚ್ ಇವಿ' 366 ಲೀಟರ್‌ ಮತ್ತು 'ಎಂಜಿ ವಿಂಡ್ಸರ್ ಇವಿ'ಯು ಬೃಹದಾಕಾರದ 604 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ವೈಶಿಷ್ಟ್ಯಗಳು (Features):

ಇವೆರೆಡು ಕಾರುಗಳು ಹತ್ತಾರು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಹೊಂದಿವೆ. 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್'ಯು 10.2-ಇಂಚಿನ ಸೆಂಟ್ರಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 2-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್‌ನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

'ಎಂಜಿ ವಿಂಡ್ಸರ್ ಇವಿ'ಯು 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಆಲ್ ವೀಲ್‌ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Saturday, February 21, 2026, 13:24 [IST]
English summary
Tata punch ev facelift vs mg windsor which suv best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+