Tata: 5.59 ಲಕ್ಷ ರೂಪಾಯಿ.. 2026ರ ನೂತನ ಟಾಟಾ ಪಂಚ್ ಕಾರಿನ ಆನ್-ರೋಡ್ ದರವೆಷ್ಟು, Emi ಇಷ್ಟೆನಾ?

ಈಚೆಗೆ 2026ರ ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ನೀವು ನೂತನ ಕಾರನೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಪಂಚ್' ಬೆಸ್ಟ್ ಚಾಯ್ಸ್ ಆಗಲಿದೆ. ನಾವಿಲ್ಲಿ ಈ ಎಸ್‌ಯುವಿಯ ಆನ್-ರೋಡ್ ದರ (On-Road Price) ಹಾಗೂ ಇಎಂಐ (Emi) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

'ಟಾಟಾ ಪಂಚ್ ಫೇಸ್‌ಲಿಫ್ಟ್' ಹಲವು ವಿಧದಲ್ಲಿ ಲಭ್ಯವಿದೆ. ಇದರ ಸ್ಮಾರ್ಟ್ (ಪೆಟ್ರೋಲ್) ರೂಪಾಂತರ, ರೂ.6.70 ಲಕ್ಷ ಆನ್-ರೋಡ್ ದರವನ್ನು ಹೊಂದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.5.70 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.11,500 ವರೆಗೆ ಇಎಂಐ ಕಟ್ಟಬೇಕು.

Tata Punch Facelift On-Road Price And Emi Details

ಮತ್ತೊಂದು ಪ್ಯೂರ್ (ಪೆಟ್ರೋಲ್) ರೂಪಾಂತರ, ರೂ.7.76 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.6.76 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.13,700 ವರೆಗೆ ಇಎಂಐ ಪಾವತಿಸಬೇಕು.

ಇನ್ನೊಂದು ಅಡ್ವೆಂಚರ್ (ಪೆಟ್ರೋಲ್) ರೂಪಾಂತರ, ರೂ.9.05 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡಿದರೆ, ರೂ.8.05 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.16,000 ವರೆಗೆ ಇಎಂಐ ಕಟ್ಟಬೇಕು.

ಈ 'ಪಂಚ್' ಎಸ್‌ಯುವಿ ಸ್ಮಾರ್ಟ್ (ಸಿಎನ್‌ಜಿ) ರೂಪಾಂತರ, ರೂ.7.99 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.6.99 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ತಿಂಗಳಿಗೆ ರೂ.14,100 ವರೆಗೆ ಇಎಂಐ ಪಾವತಿಸಬೇಕು.

ಇದೇ ಕಾರಿನ ಪ್ಯೂರ್ (ಸಿಎನ್‌ಜಿ) ರೂಪಾಂತರ, ರೂ.8.93 ಲಕ್ಷ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.7.93 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.16,100 ವರೆಗೆ ಇಎಂಐ ಕಟ್ಟಬೇಕು.

'ಟಾಟಾ ಪಂಚ್ ಫೇಸ್‌ಲಿಫ್ಟ್' ವಿಶೇಷತೆಗಳೇನು:

ಹೊಸ 'ಪಂಚ್' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಸೈಂಟಿಫಿಕ್ ಬ್ಲೂ ಮತ್ತು ಕ್ಯಾರಮೆಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಜೊತೆಗೆ ಸಾಕಷ್ಟು ವಿಶಾಲ ಗಾತ್ರದಲ್ಲಿದ್ದು, 193 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ಈ ಕಾರು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟೈಪ್-ಸಿ ಫಾಸ್ಟ್ ಚಾರ್ಜರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನಿಮ್ಮ ಗಮನಕ್ಕೆ.. ಇಲ್ಲಿ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Friday, January 16, 2026, 11:05 [IST]
English summary
Tata punch facelift on road price and emi detail
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+