TATA: ಬಿಡುಗಡೆಗೂ ಮುನ್ನವೇ ಡೀಲರ್‌ಶಿಪ್‌ಗೆ ಬಂದೇ ಬಿಡ್ತು ಹೊಸ ಟಾಟಾ SUV.. 5 ಲಕ್ಷ? ಮಂಗಳವಾರ ಮಾರಾಟಕ್ಕೆ!
ಇದೇ ಮಂಗಳವಾರ (ಜ.13) ಹೊಚ್ಚ ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಮೈಕ್ರೋ ಎಸ್‌ಯುವಿ ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಈ ಕಾರು ನವೀನವಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಸದ್ಯ ದೇಶಾದ್ಯಂತ ಡೀಲರ್‌ಶಿಪ್‌ಗೆ ನೂತನ 'ಪಂಚ್'ನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಆನ್‌ಲೈನ್‌ನಲ್ಲಿಯೂ ಸೋರಿಕೆಯಾಗಿವೆ.
ಈಗಾಗಲೇ 'ಟಾಟಾ ಪಂಚ್ ಫೇಸ್‌ಲಿಫ್ಟ್' ಎಸ್‌ಯುವಿ ಕುರಿತಂತೆ ಕಂಪನಿ ಸಹ ಹಲವು ಪ್ರಮುಖ ವಿವರಗಳನ್ನು ಬಹಿರಂಗಪಡಿಸುತ್ತಿದೆ. ವಿಶೇಷವಾಗಿ ಬಣ್ಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಗುರುವಾರವಷ್ಟೇ ಹಂಚಿಕೊಂಡಿದೆ. ಹೊಸ 'ಪಂಚ್' ಸೆಂಟಿಫಿಕ್ ಬ್ಲ್ಯೂ, ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಬೆಂಗಾಲ್ ರೂಜ್ (ರೆಡ್), ಕ್ಯಾರಮೆಲ್, ಡೇಟೋನಾ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ 6 ಅತ್ಯಾಧುನಿಕವಾದ ಬಣ್ಣಗಳೊಂದಿಗೆ ಲಭ್ಯವಾಗುತ್ತದೆ ಎಂದು ಹೇಳಿದೆ.

ಅದಕ್ಕೂ ಮೊದಲು ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ 6 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ ಎಂದು ಘೋಷಣೆ ಮಾಡಿತ್ತು. ಜೊತೆಗೆ ವಿನ್ಯಾಸ ಹಾಗೂ ವೈಶಿಷ್ಟ್ಯಗಳು ಬಗ್ಗೆಯೂ ಸಂಕ್ಷಿಪ್ತವಾಗಿ ವಿವರಿಸಿತ್ತು.
ಹಳೆಯ 'ಟಾಟಾ ಪಂಚ್'ಗೆ ಹೋಲಿಕೆ ಮಾಡಿದರೆ, ಹೊಸ ಫೇಸ್‌ಲಿಫ್ಟ್ ಮಾಡೆಲ್ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್ ಲೈಟ್‌ಗಳು, ರೇರ್ ಡಿಫಾಗರ್, ರೈನ್ ಸೆನ್ಸಿಂಗ್ ವೈಪರ್‌ಗಳು ಹಾಗೂ 15/ 16 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 8 ಅಥವಾ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೈಟ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವಾಯ್ಸ್ ಅಸಿಸ್ಟ್ ಸನ್‌ರೂಫ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ಬ್ಲೈಂಡ್ ವ್ಯೂ ಮಾನಿಟರ್, ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದರ ಪವರ್‌ಟ್ರೇನ್ ಕುರಿತಂತೆ ಕಂಪನಿಯು ಯಾವುದೇ ವಿವರಗಳನ್ನು ಹೊರಬಿಟ್ಟಿಲ್ಲ. ಆದರೂ ಈಗಿರುವ 'ಪಂಚ್'ನಂತೆಯೇ ಎಂಜಿನ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. ಹಾಗೆಯೇ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರಲಿದೆ ಎಂಬುದು ಬಹುತೇಕ ಖಚಿತವಾಗಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.
ಈ ಕಾರು ಅಗ್ಗದ ದರದಲ್ಲೂ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.5.3 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis), ಹ್ಯುಂಡೈ ಎಕ್ಸ್‌ಟರ್ (Hyundai Exter) ಹಾಗೂ ಸಿಟ್ರನ್ ಸಿ3 (Citroen C3) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
Image Source: Team Bhp


Click it and Unblock the Notifications








