Tata: ಬೆಲೆ ಇಷ್ಟೇನಾ! ಹೊಸ ಟಾಟಾ ಎಸ್‌ಯುವಿ ಡೆಲಿವರಿ ಶುರು.. ವಿಶೇಷತೆಗಳೇನು?
ಇದೇ ಜನವರಿ 13ರಂದು 2026ರ ಹೊಚ್ಚ ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಮೈಕ್ರೋ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಹಳೆಯ 'ಪಂಚ್'ಗೆ ಹೋಲಿಕೆ ಮಾಡಿದರೆ, ಹಲವು ಸುಧಾರಿತ ನವೀಕರಣಗಳಿಗೂ ಸಾಕ್ಷಿಯಾಗಿದೆ. ಹೆಚ್ಚುವರಿಯಾಗಿ ಶಕ್ತಿಯುತವಾದ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ಇದೀಗ ದೇಶಾದ್ಯಂತ ನೂತನ 'ಪಂಚ್ ಫೇಸ್‌ಲಿಫ್ಟ್' ವಿತರಣೆಗಳು ಶುರುವಾಗಿದೆ. ಗ್ರಾಹಕರು ಸಹ ತಮ್ಮ ನೆಚ್ಚಿನ ಕಾರನ್ನು ಸಂಭ್ರಮ - ಸಡಗರದಿಂದ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ.
'ಟಾಟಾ ಪಂಚ್ ಫೇಸ್‌ಲಿಫ್ಟ್' ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ದೊರೆಯಲಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸೆಂಟಿಫಿಕ್ ಬ್ಲ್ಯೂ, ಸಿಲ್ವರ್, ರೆಡ್, ಕ್ಯಾರಮೆಲ್, ಡೇಟೋನಾ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 193 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಹೊಸ 'ಪಂಚ್ ಫೇಸ್‌ಲಿಫ್ಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಬೆಲೆಗೆ ತಕ್ಕಂತೆ 3 ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 88 ಪಿಎಸ್ ಅಶ್ವ ಶಕ್ತಿ ಹಾಗೂ 115 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 73.4 ಪಿಎಸ್ ಅಶ್ವ ಶಕ್ತಿ ಮತ್ತು 103 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ನೂತನ 'ಪಂಚ್' ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 ರಿಂದ 27 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೈನ್ ಸೆನ್ಸಿಂಗ್ ವೈಪರ್‌ಗಳು, ಸನ್‌ರೂಫ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ.
'ಟಾಟಾ ಪಂಚ್ ಫೇಸ್‌ಲಿಫ್ಟ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿಯೂ ಯಶಸ್ವಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹ್ಯುಂಡೈ ಎಕ್ಸ್‌ಟರ್ (Hyundai Exter), ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
Image Source Link: Youtube Shorts/ PRISHIVI Vlogs


Click it and Unblock the Notifications








