Tata: ಪವರ್ ತೋರಿಸಿದ ಟಾಟಾ.. ಅಗ್ಗದ ಹೊಸ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!
ಇತ್ತೀಚೆಗೆ 2026ರ ನೂತನ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) 'ಪಂಚ್ ಫೇಸ್‌ಲಿಫ್ಟ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದೆ.
ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.58 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿ ಸಫಲವಾಗಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
'ಟಾಟಾ ಪಂಚ್ ಫೇಸ್‌ಲಿಫ್ಟ್' ವಿಶೇಷತೆಗಳೇನು:
ಇದು ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ನೂತನ 'ಪಂಚ್ ಫೇಸ್‌ಲಿಫ್ಟ್' ಹೆಚ್ಚು ವಿಶಾಲವಾಗಿದೆ. 193 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಸೈಂಟಿಫಿಕ್ ಬ್ಲೂ ಮತ್ತು ಕ್ಯಾರಮೆಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಹೆಚ್ಚು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೈನ್ ಸೆನ್ಸಿಂಗ್ ವೈಪರ್‌ಗಳು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ ಮತ್ತು ಸನ್‌ರೂಫ್‌ನ್ನು ಒಳಗೊಂಡಿದೆ.
ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹ್ಯುಂಡೈ ಎಕ್ಸ್‌ಟರ್ (Hyundai Exter), ನಿಸ್ಸಾನ್ ಮ್ಯಾಗ್ನೈಟ್ (Nissan Magnite), ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx), ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಹಾಗೂ ರೆನಾಲ್ಟ್ ಕೈಗರ್ (Renault Kiger) ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








