Tata: ಪ್ರೀಮಿಯಂ ಬೈಕ್ ದರಕ್ಕೆ ಹೊಸ ಟಾಟಾ ಪಂಚ್.. ಮಧ್ಯಮ ವರ್ಗದವರಿಗೆ ಪರ್ಫೆಕ್ಟ್, ರೂ.5.59 ಲಕ್ಷಕ್ಕೆ ಬಿಡುಗಡೆ
ಬಹುನಿರೀಕ್ಷಿತ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಕಾರು ಮಂಗಳವಾರ ಬಿಡುಗಡೆಗೊಂಡಿದೆ. ಇದು ಮೈಕ್ರೋ ಎಸ್‌ಯುವಿಯಾಗಿದೆ. ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಹೊಸತನಗಳಿಗೆ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಬನ್ನಿ, ಈ ನೂತನ ಎಸ್‌ಯುವಿಯ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ 'ಟಾಟಾ ಪಂಚ್ ಫೇಸ್‌ಲಿಫ್ಟ್' ಕನಿಷ್ಠ ರೂ.5.59 ಲಕ್ಷ ಹಾಗೂ ಗರಿಷ್ಠ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬುಕ್ಕಿಂಗ್‌ನ್ನು ಸಹ ತೆರೆಯಲಾಗಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಕಾಂಪ್ಲಿಶ್ಡ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹಳೆಯ 'ಪಂಚ್'ಗೆ ಹೋಲಿಸಿದರೆ, ಸಾಕಷ್ಟು ಬದಲಾವಣೆಗಳಾಗಿವೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್ ಲೈಟ್‌ಗಳು, ರೇರ್ ಡಿಫಾಗರ್, ರೈನ್ ಸೆನ್ಸಿಂಗ್ ವೈಪರ್‌ಗಳು ಮತ್ತು 15/ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸೆಂಟಿಫಿಕ್ ಬ್ಲ್ಯೂ, ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಬೆಂಗಾಲ್ ರೂಜ್ (ರೆಡ್), ಕ್ಯಾರಮೆಲ್, ಡೇಟೋನಾ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಟಾಟಾ ಪಂಚ್ ಫೇಸ್‌ಲಿಫ್ಟ್' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 366 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಮೈಕ್ರೋ ಎಸ್‌ಯುವಿಯಾಗಿದ್ದರೂ ವಿಶಾಲ ಗಾತ್ರದಲ್ಲಿದೆ. 3,827 ಮಿ.ಮೀ ಉದ್ದ, 1,742 ಮಿ.ಮೀ ಅಗಲ ಹಾಗೂ 1,615 ಮಿ.ಮೀ ಎತ್ತರವಿದೆ. 193 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 120 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 73.4 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ನೂತನ 'ಪಂಚ್' 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ನವೀನವಾಗಿದೆ. 8 ಅಥವಾ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್, ಟೈಪ್-ಸಿ ಫಾಸ್ಟ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಪಂಚ್ ಫೇಸ್‌ಲಿಫ್ಟ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ಬ್ಲೈಂಡ್ ವ್ಯೂ ಮಾನಿಟರ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನುತನ್ನದಾಗಿಸಿಕೊಂಡಿದೆ.


Click it and Unblock the Notifications








